More

    ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಶಾಲಾ ಬಸ್​ ಪಲ್ಟಿ; ಚಾಲಕನ ನಿರ್ಲಕ್ಷ್ಯ ಆರೋಪ

    ಚಾಮರಾಜನಗರ: ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ಅಪಘಾತ ನಡೆದಿದೆ.

    ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಮಕ್ಕಳನ್ನು ಶಾಲೆಯಿಂದ ಮರಳಿ ಊರಿಗೆ ಬಿಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

    ಈ ವಾಹನದಲ್ಲಿ 20ಕ್ಕೂ ಅಧಿಕ ಮಕ್ಕಳಿದ್ದು, ಚಾಲಕನ‌ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದೃಷ್ಟವಶಾತ್ ಮಕ್ಕಳಿಗೆ ಪ್ರಾಣಾಪಾಯ ಉಂಟಾಗಿಲ್ಲ. ಈ ಮಧ್ಯೆ ಪೋಷಕರಿಗೆ ವಿಚಾರ ತಿಳಿಸದೆ ಶಾಲಾ ಆಡಳಿತ ಮಂಡಳಿ ಗೂಡ್ಸ್ ವಾಹನದಲ್ಲಿ ಮಕ್ಕಳನ್ನು ಗ್ರಾಮಗಳಿಗೆ ಕಳುಹಿಸಿದೆ ಎನ್ನಲಾಗಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

    ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..

    ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts