Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

80 ವಿದ್ಯಾರ್ಥಿಗಳಿದ್ದ ಸ್ಕೂಲ್‌ ಬಸ್‌ ಪಲ್ಟಿ, ತಪ್ಪಿದ ಭಾರಿ ಅನಾಹುತ

Monday, 11.06.2018, 7:18 PM       No Comments

ವಿಜಯಪುರ‌: ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ವಾಹನ ಪಲ್ಟಿಯಾಗಿ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಇಂಡಿ ತಾಲೂಕಿನ ಧೂಳಖೇಡ ಗ್ರಾಮದ ಬಳಿ ವಾಹನ ಪಲ್ಟಿಯಾಗಿದ್ದು,ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿಗಳು ಪಾರಾಗಿದ್ದಾರೆ.

ಶಿರನಾಳದಿಂದ ಮರಗೂರಿಗೆ ಹೊರಟಿದ್ದ ಶಾಲಾ ವಾಹನದಲ್ಲಿ ಸುಮಾರು 80 ವಿದ್ಯಾರ್ಥಿಗಳು ಇದ್ದರು. ಟಯರ್ ಬ್ಲಾಸ್ಟ್ ಆದ ಹಿನ್ನೆಲೆ ಪಲ್ಟಿಯಾಗಿದೆ. ಅದರ ಸಮೀಪವೇ ಇದ್ದ ತೆರೆದ ಬಾವಿಯ ಹತ್ತಿರವೇ ಬಸ್‌ ಪಲ್ಟಿಯಾಗಿದ್ದು, ಭಾರಿ ಅನಾಹುತ ತಪ್ಪಿದೆ.

ಘಟನೆ ಬಳಿಕ ಚಾಲಕ ಮಾರುತಿ ಹೂಗಾರ್ ಪರಾರಿಯಾಗಿದ್ದು, ಗಾಯಗೊಂಡಿದ್ದ ಮೂರ್ನಾಲ್ಕು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಶಾಲೆ, ಚಾಲಕನ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top