More

    ಶಾಲಾ ಛಾವಣಿ ಪದರ ಕುಸಿತ, ಐವರು ವಿದ್ಯಾರ್ಥಿಗಳಿಗೆ ಗಾಯ…

    ಉತ್ತರಕನ್ನಡ: ರಾಜ್ಯದಲ್ಲಿ ಬಹಳಷ್ಟು ಶಾಲೆಗಳು ಶಿಥಿಲಾವಸ್ಥೆಯಲ್ಲಿರುವುದು ಇಲ್ಲವೇ ಕಳಪೆ ಕಾಮಗಾರಿಯ ಕಟ್ಟಡವನ್ನು ಹೊಂದಿರುವುದು ಹಳೆಯ ವಿಷಯವೇ. ಆ ಬಗ್ಗೆ ಬಹಳಷ್ಟು ಸುದ್ದಿಯಾಗಿದ್ದರೂ ಇನ್ನೂ ಕೆಲವೆಡೆ ಅಂಥದ್ದೇ ಪರಿಸ್ಥಿತಿ ಮುಂದುವರಿದಿದೆ. ಪರಿಣಾಮವಾಗಿ, ಇಂದು ಶಾಲೆಯೊಂದರ ಮೇಲ್ಛಾವಣಿ ಪದರ ಕುಸಿದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಿರ್ಮಲ ಹೃದಯ ಪ್ರಾಥಮಿಕ ಶಾಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ. ಈ ಶಾಲೆಯ ಮಕ್ಕಳು ಮಧ್ಯಾಹ್ನ ಊಟ ಮಾಡುತ್ತಿರುವಾಗಲೇ ಶಾಲೆಯ ಮೇಲ್ಛಾವಣಿ ಪದರಗಳು ಕಿತ್ತುಕೊಂಡು ಉದುರಿವೆ. ಈ ಸಂದರ್ಭದಲ್ಲಿ ಐವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

    ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಅಂಕೋಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರಗಳ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

    15 ಸಾವಿರ ಶಿಕ್ಷಕರ ನೇಮಕಾತಿಗೆ ಮೇನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts