ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಾಲೆ ಅಭಿವೃದ್ಧಿ

Sul_Book
Published on

ನೆಟ್ಟಾರು: ಸ್ಥಳೀಯ ಸಂಸ್ಥೆಗಳು ಶಾಲೆಯ ಪ್ರಗತಿಯಲ್ಲಿ ಕೈಜೋಡಿಸಿದರೆ ಅಭಿವೃದ್ಧಿ ಸಾಧ್ಯ. ಶಾಲಾ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ವರ್ಷ ಯುವಕ ಮಂಡಲದ ವತಿಯಿಂದ ನೋಟ್ ಪುಸ್ತಕ ವಿತರಿಸಲಾಗುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ನೆಟ್ಟಾರು ಹೇಳಿದರು.

ನೆಟ್ಟಾರು ಅಕ್ಷಯ ಯುವಕ ಮಂಡಲ ವತಿಯಿಂದ ನೆಟ್ಟಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಖ್ಯಶಿಕ್ಷಕಿ ನಳಿನಾಕ್ಷಿ ಮಾತನಾಡಿ, ಶಾಲೆಯ ಎಲ್ಲ ಚಟುವಟಿಕೆಯಲ್ಲಿ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಸದಸ್ಯರ ಒಗ್ಗೂಡುವಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವಕ ಮಂಡಲದ ಅಧ್ಯಕ್ಷ ಪದ್ಮನಾಭ ಕೋಡಿಬೈಲು ಅಧ್ಯಕ್ಷತೆ ವಹಿಸಿದ್ದರು.

ಯುವಕ ಮಂಡಲದ ಕಾರ್ಯದರ್ಶಿ ಲೋಕೇಶ್ ನೆಟ್ಟಾರು, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಜಯಶ್ರೀ, ಯುವಕ ಮಂಡಲದ ಸದಸ್ಯರು, ಮಹಿಳಾ ಮಂಡಲ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮಕ್ಕಳು ಪ್ರಾರ್ಥಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಚಾವಡಿಬಾಗಿಲು ಸ್ವಾಗತಿಸಿದರು. ಸ್ಥಾಪಕ ಅಧ್ಯಕ್ಷ ದೇವದಾಸ್ ನೆಟ್ಟಾರು ವಂದಿಸಿದರು. ಶೈಲೇಶ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net