ಸಿಎಸ್‌ಆರ್ ಅನುದಾನದಲ್ಲಿ ಶಾಲಾಭಿವೃದ್ಧಿ

ವಾಹನ ಸವಾರರಿಗೆ ನಿತ್ಯ ಕಿರಿಕಿರಿ 2 ವರ್ಷಗಳಿಂದಲೂ ಪ್ರಯಾಣಿಕರಿಗೆ ತಪ್ಪದ ಪರದಾಟ



ಶಿಡ್ಲಘಟ್ಟ: ತಾಲೂಕಿನ 78 ಹಳ್ಳಿಗಳಲ್ಲಿನ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣದ ಅಗತ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಪಟ್ಟಿ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಂದಿನ ಬಜೆಟ್ ನಂತರ ಕೈಗಾರಿಕೆಗಳ ಸಿಎಸ್‌ಆರ್ ಅನುದಾನದಲ್ಲಿ ಹಣ ಒದಗಿಸುವುದಾಗಿ ಭರವಸೆ ನೀಡಿದ್ದು, ಈ ಹಣದಲ್ಲಿ ತಾಲೂಕಿನ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಕ್ರಮವಹಿಸುವುದಾಗಿ ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ನಗರದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಮಕ್ಕಳು ಕಲಿಕೆಯಲ್ಲಿ ಮುಂಚೂಣಿಯಲ್ಲಿರಲು ಶಿಕ್ಷಕರು ಪರಿಶ್ರಮ ಹಾಕಬೇಕು. ವಿದ್ಯಾರ್ಥಿಗಳು ಒಳ್ಳೆಯ ಸಾಧಕರಾಗುವಂತೆ ಮಾರ್ಗದರ್ಶನದ ಜತೆಗೆ ಆತ್ಮಸ್ಥೈರ್ಯ ತುಂಬಬೇಕು. ಶಿಕ್ಷಣದಲ್ಲಿ ಶಿಡ್ಲಘಟ್ಟ ತಾಲೂಕನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವ ಕಾರ್ಯವಾಗಬೇಕು ಎಂದರು. ಸಂಸದ ಎಂ.ಮಲ್ಲೇಶ್‌ಬಾಬು ಮಾತನಾಡಿ, ಶಿಕ್ಷಕರೂ ಸಹ ಉತ್ತಮ ಅಭ್ಯಾಸನಿರತರಾಗಬೇಕು ಮತ್ತು ಅಧ್ಯಯನಶೀಲರಾಗಬೇಕು. ನಿಮ್ಮನ್ನು ನೋಡಿ ಮಕ್ಕಳು ಪ್ರಭಾವಿತರಾಗುತ್ತಾರೆ ಎಂದರು.
ತಹಸೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಉತ್ತಮ ಶಿಕ್ಷಕ ವೃಂದವಿದ್ದಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗುತ್ತಾರೆ. ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಿ. ಉತ್ತಮ ನಡವಳಿಕೆ ಹಾಗೂ ಮೌಲ್ಯಗಳು ಮಕ್ಕಳ ಮನದಲ್ಲಿ ಬೇರೂರುವಂತೆ ಮಾಡಬೇಕಿದೆ ಎಂದರು. ವಿಜಯಪುರ ಸಾಯಿ ಜ್ಞಾನ ಗಂಗಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎನ್.ಶ್ರೀನಿವಾಸಮೂರ್ತಿ ಉಪನ್ಯಾಸ ನೀಡಿದರು. ನಿವೃತ್ತರಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ತಾಪಂ ಇಒ ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರ ಕುಮಾರ್, ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಪಿ.ಬೈಲಾಂಜಿನಪ್ಪ, ಡಯಟ್‌ನ ಪ್ರಾಂಶುಪಾಲ ಮುನಿಕೆಂಪೇಗೌಡ, ಜೆಡಿಎಸ್ ಮುಖಂಡ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಉಪಾಧ್ಯಕ್ಷೆ ರೂಪಾ ನವೀನ್, ಪ್ರೌಢಶಾಲಾ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವೆಂಕಟರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಆರ್.ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ, ಬಿಆರ್‌ಸಿ ಸಮನ್ವಯಾಧಿಕಾರಿ ಲಕ್ಷ್ಮೀನಾರಾಯಣ್, ಶಿಕ್ಷಣ ಸಂಯೋಜಕ ಮಂಜುನಾಥ್, ಪರಿಮಳಾ ಇದ್ದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…