More

    ಶಾಲೆಗೆ ಕುಡಿವ ನೀರು, ಶೌಚಗೃಹ ಕಲ್ಪಿಸಿ; ಚಳ್ಳೂರು ಗ್ರಾಪಂ ಕಚೇರಿಗೆ ವಿದ್ಯಾರ್ಥಿಗಳ ಮುತ್ತಿಗೆ

    ಕಾರಟಗಿ: ತಾಲೂಕಿನ ಚಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿವ ನೀರು ಮತ್ತು ಶೌಚಗೃಹ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಎಸ್ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸೋಮವಾರ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ಶಾಲೆಯಲ್ಲಿ ಶುದ್ಧ ಕುಡಿವ ನೀರು ಮತ್ತು ಸುಸಜ್ಜಿತ ಶೌಚಗೃಹ ಇಲ್ಲದಂತಾಗಿದ್ದು, ಎಂಟು ವರ್ಷಗಳಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ನರೇಗಾ ಅಥವಾ ಇತರ ಯೋಜನೆಯ ಮೀಸಲು ಅನುದಾನದಲ್ಲಿ ಶಾಲೆಗೆ ಶುದ್ಧ ಕುಡಿವ ನೀರು ಮತ್ತು ಸುಸಜ್ಜಿತ ಶೌಚಗೃಹ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಎಸ್ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಗ್ರಾಪಂ ಪಿಡಿಒ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಬುಕ್ಕನಹಟ್ಟಿ, ಪ್ರಮುಖರಾದ ಶರಣಪ್ಪ ಕರಡೋಣಿ, ಮಲ್ಲೆಪ್ಪ ನಾಕೆತ್ತಿನ್ ಇತರರಿದ್ದರು.

    ಶಾಲೆಗೆ ಶುದ್ಧ ಕುಡಿವ ನೀರು ಮತ್ತು ಸುಸಜ್ಜಿತ ಶೌಚಗೃಹ ನಿರ್ಮಾಣದ ಕುರಿತು ಆಡಳಿತ ಮಂಡಳಿ ಹಾಗೂ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತ ಕಾಪಾಡಲು ಸದಾ ಸಿದ್ಧರಿದ್ದೇವೆ.
    | ಭಾಗೇಶ್ವರಿ, ಚಳ್ಳೂರು ಗ್ರಾಪಂ ಪಿಡಿಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts