More

    ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್​ ವಾರ್ಡನ್​ ಅಮಾನತು

    ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

    ಇದನ್ನೂ ಓದಿ:ಹನಿ ರೋಸ್​ ನೋಡ್ತಿದ್ರೆ… ನಟಿಯ ಈ ಅಂಗಗಳ ಬಗ್ಗೆ ಮಾತನಾಡಿ ವಿವಾದ ಹುಟ್ಟುಹಾಕಿದ ಯೂಟ್ಯೂಬರ್​

    ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಧುಗಿರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಕಳೆದ ಮೂರು ದಿನಗಳ ಹಿಂದೆ ಊರಿಗೆ ಬಂದು ತನ್ನ ತಂದೆತಾಯಿಗೆ ಹೊಟ್ಟೆನೋವು ಎಂದು ತಿಳಿಸಿದ್ದಾಳೆ. ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಇದು ಹೊಟ್ಟೆ ನೋವಲ್ಲ ಹೆರಿಗೆ ನೋವೆಂದು ಪೋಷಕರಿಗೆ ತಿಳಿಸಿದ್ದಾರೆ.

    ಇದಾದ ಕೆಲವೇ ಕ್ಷಣಗಳಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ. ತಾಯಿ ಮಗುವನ್ನು ಹೆಚ್ಚಿನ ಆರೈಕೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಸ್ವಯಂ ದೂರು ದಾಖಲಿಸಿಕೊಂಡಿರುವ ಬಾಗೇಪಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ.? ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ‌ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.

    ಅನುಷ್ಕಾ-ವಿರಾಟ್ ಮಗಳಿಗೀಗ 3 ವರ್ಷ…ಈವರೆಗೆ ಮುಖವನ್ನು ರಿವೀಲ್‌ ಮಾಡದಿದ್ದರೂ ತಂದೆ-ತಾಯಿಯೊಂದಿಗಿರುವ ವಮಿಕಾ ಮುದ್ದಾದ ಫೋಟೋಗಳು ಇಲ್ಲಿವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts