More

    ಶಾಲಾ ಬಿಸಿಯೂಟ: ಮೊದಲ ಹಂತದಲ್ಲಿ ರಾಜ್ಯ, ಕೇಂದ್ರ ಬಿಡುಗಡೆ ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ?

    ಬೆಂಗಳೂರು ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 8 ನೇ ತರಗತಿ ಮಕ್ಕಳಿಗೆ 2023- 24ನೇ ಸಾಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲಿನ ಮೊದಲ ಹಂತದ ಅನುದಾನ 216.19 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

    ಕೇಂದ್ರ ಸರ್ಕಾರದ ಪಾಲಿನ 135.18 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದ ಪಾಲಿನ 81 ಕೋಟಿ ರೂ. ಹಣ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

    ಪ್ರಸಕ್ತ ಸಾಲಿನ ಜುಲೈ ಬಜೆಟ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕೇಂದ್ರದ ಪಾಲಿನ 570 ಕೋಟಿ ರೂ. ಮತ್ತು ರಾಜ್ಯದ ಪಾಲಿನ 330 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಪೈಕಿ ಮೊದಲ ಹಂತದ ಅನುದಾನ ಈಗ ಬಿಡುಗಡೆ ಮಾಡಲಾಗಿದೆ. ಈ ಅನುದಾನದ ವೆಚ್ಚವನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಆಯಾ ಜಿಪಂ ಸಿಇಒ ಮತ್ತು ಲೆಕ್ಕಾಧಿಕಾರಿಗಳು ಸಂಬಂಧಪಟ್ಟ ಶಾಲೆಗಳಿಗೆ ಅನುದಾನ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಚರತಾ ಇಲಾಖೆ ಆದೇಶ ಹೊರಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts