ಶಾಲೆ ಆರಂಭಿಸುವ ವಿಷಯದಲ್ಲಿ ಸಿದ್ದು-ಎಚ್‌ಡಿಕೆ ಮಾತಿಗೆ ದನಿಗೂಡಿಸಿದ ಶೋಭಾ

shobha
Published on

ಬೆಂಗಳೂರು: ಕರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬಾರದು ಎಂಬುದಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ದನಿಗೂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಶೋಭಾ, ಮೊದಲು ಜೀವ ಉಳಿಸೋಣ, ನಂತರ ಜೀವನ ನಡೆಸೋಣ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವುದನ್ನು ನಾವೆಲ್ಲರೂ ಪಾಲಿಸೋಣ. ಸದ್ಯಕ್ಕೆ ಶಾಲೆ ಆರಂಭಿಸುವುದು ಬೇಡ. ಅಷ್ಟೇ ಅಲ್ಲ, ಈ ಶೈಕ್ಷಣಿಕ ವರ್ಷವನ್ನು ‘ಶಾಲಾಪರೀಕ್ಷಾ ರಹಿತ ವರ್ಷ’ ಅಂತ ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರೊನಾ ಸೋಂಕಿನಿಂದ ಶಿಕ್ಷಕರೂ ಸಾಯುತ್ತಿದ್ದಾರೆ. ಈ ಹಂತದಲ್ಲಿ ಶಾಲೆ ಪ್ರಾರಂಭಿಸುವುದರಿಂದ ಅವರಿಗೂ, ಮಕ್ಕಳಿಗೂ ಇಬ್ಬರಿಗೂ ತೊಂದರೆಯಾಗುತ್ತದೆ. ಶಿಕ್ಷಕರು ಮತ್ತು ಮಕ್ಕಳ ಜೀವ ಉಳಿಸಲು ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net