

ಮೂಡುಬಿದಿರೆ: ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯ ಒದಗಿಸುವ ವೇದಿಕೆ. ವೇದಿಕೆಯ ಮೇಲಿರುವವರು ಮಾತ್ರ ನಾಯಕರಲ್ಲ ಮುಂಭಾಗದಲ್ಲಿರುವವರು ನಾಯಕರಾಗುವ ಯೋಗ್ಯತೆ ಹೊಂದಿರುತ್ತಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅಭಿಪ್ರಾಯಪಟ್ಟರು.
ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಶಾಲಾ ಸಂಸತ್ತು ಉದ್ಘಾಟಿಸಿ ಮಾತನಾಡಿದರು.
ವಕೀಲ ಜಿನೇಂದ್ರ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಎಕ್ಸಲೆಂಟ್ ವಿದ್ಯಾಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯಶಿಕ್ಷಕ ಶಿವಪ್ರಸಾದ ಭಟ್, ಉಪಮುಖ್ಯಶಿಕ್ಷಕ ಜಯಶೀಲ ಉಪಸ್ಥಿತರಿದ್ದರು. ವೆನಿಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿದರು. ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.
ವಿದ್ಯಾರ್ಥಿ ಸಂಸತ್ತು ಕಲಿಕೆಯನ್ನು ಪ್ರಾಯೋಗಿಕವಾಗಿ ಅನುಭವಿಸುವ ಒಂದು ಉತ್ತಮ ವೇದಿಕೆ. ಅದು ನಾಯಕತ್ವ ಮತ್ತು ಜವಾಬ್ದಾರಿಯ ಮೌಲ್ಯ ಬೆಳೆಸುತ್ತದೆ. ವ್ಯಕ್ತಿಯ ವರ್ತನೆ, ನಡತೆಗಳೇ ವ್ಯಕ್ತಿತ್ವದ ಮಾನದಂಡ. ಉತ್ತಮ ಸಂಸ್ಕಾರ ಮೈಗೂಡಿಸಿಕೊಂಡಾಗ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಸಾಧ್ಯ. ಯುವರಾಜ್ ಜೈನ್ ಅಧ್ಯಕ್ಷ, ಎಕ್ಸಲೆಂಟ್ ವಿದ್ಯಾಸಂಸ್ಥೆ