25.7 C
Bangalore
Sunday, December 15, 2019

ಒಂದೇ ಕೊಠಡಿಯಲ್ಲಿ 120 ಮಕ್ಕಳು

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಬಸಯ್ಯ ವಸ್ತ್ರದ ರಬಕವಿ/ಬನಹಟ್ಟಿ: ಮಕ್ಕಳ ಕೊರತೆಯಿದೆ ಎಂದು ರಾಜ್ಯ ಸರ್ಕಾರ ನೂರಾರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಂದ್ ಮಾಡಲು ಹೊರಟಿದೆ. ಆದರೆ ರಬಕವಿ- ಬನಹಟ್ಟಿ ಪ.ಪೂ. ಕಾಲೇಜಿನಲ್ಲಿ ಅಗತ್ಯಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲದೆ ನೆಲದ ಮೇಲೆ ಕುಳಿತು ಪಾಠ ಕೇಳುವ ಸ್ಥಿತಿ ಇದೆ.

ರಬಕವಿ- ಬನಹಟ್ಟಿ ಅವಳಿ ನಗರಗಳಲ್ಲಿ ಶೇ. 80ಕ್ಕೂ ಅಧಿಕ ನೇಕಾರ ಸಮುದಾಯದವರೇ ಇದ್ದು, ಅವರ ಮಕ್ಕಳು ಸರ್ಕಾರಿ ಕಾಲೇಜನ್ನೇ ಅವಲಂಬಿಸಿದ್ದಾರೆ. ಆದರೆ ಕಾಲೇಜಿನಲ್ಲಿ ಕೊಠಡಿಗಳ ಕೊರತೆ ಇರುವುದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗುತ್ತಿದೆ.

ಕೊಠಡಿಗಳ ಕೊರತೆ: ಪ್ರಥಮ ಪಿಯುಸಿಯಲ್ಲಿ 460 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿಯಲ್ಲಿ 330ಕ್ಕೂ ಅಧಿಕ ಮಕ್ಕಳು ಓದುತ್ತಿದ್ದು, ಎಬಿಸಿಡಿಇ ಎಂದು ಐದು ವಿಭಾಗ ಮಾಡಲಾಗಿದೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಕೊಠಡಿಗಳಿಲ್ಲದ ಕಾರಣ ನೆಲದ ಮೇಲೆ ಹಾಗೂ ಬಾಗಿಲಲ್ಲಿ ಕುಳಿತು ಪಾಠ ಆಲಿಸಬೇಕಾದ ಪರಿಸ್ಥಿತಿಯಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸಮಸ್ಯೆಯತ್ತ ಗಮನ ಹರಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂಬುದು ಶಿಕ್ಷಣ ಪ್ರೇಮಿಗಳ ಆಗ್ರಹವಾಗಿದೆ.

ಉಪನ್ಯಾಸಕರ ಕೊರತೆ: ಕಾಲೇಜಿನಲ್ಲಿ ಕನ್ನಡ ವಿಷಯದ ಇಬ್ಬರು ಬೋಧಕರು, ವಾಣಿಜ್ಯ ವಿಷಯದ ಒಬ್ಬ ಕಾಯಂ ಬೋಧಕರ ಕೊರತೆ ಇದೆ. ಅತಿಥಿ ಶಿಕ್ಷಕರಿಂದ ಬೋಧನೆ ಮಾಡಿಸಲಾಗುತ್ತಿದೆ. ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಸಹ ಇದ್ದು, ಪ್ರಯೋಗಾಲಯಕ್ಕೆ ಪ್ರತ್ಯೇಕ ಕೊಠಡಿ ಇಲ್ಲದ ಕಾರಣ ವಿಜ್ಞಾನ ಬೋಧನೆಗೆ ತೊಂದರೆಯಾಗುತ್ತಿದೆ.

ಸರ್ಕಾರಿ ಪಿಯು ಕಾಲೇಜಿನ ತೊಂದರೆ ಗಮನಿಸಿದ್ದೇನೆ. ಗುಂಡಯ್ಯನ ಮಠದ ಪಕ್ಕದ ಏರಿಯಾದಲ್ಲಿ 4 ಕೊಠಡಿಗಳು ಹೆಚ್ಚುವರಿಯಾಗಿ ಮಂಜೂರಾಗಿದ್ದು, ಐದಾರು ತಿಂಗಳಲ್ಲಿ ಕಟ್ಟಡ ನಿರ್ವಣವಾಗಲಿವೆ. ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ.

| ಸಿದ್ದು ಸವದಿ ಶಾಸಕ ತೇರದಾಳ

ಐದು ಕೊಠಡಿ ಅವಶ್ಯಕತೆ: ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಬೋಧನೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಕಾಲೇಜು ನಿರ್ವಿುಸಬೇಕೆಂಬ ಉದ್ದೇಶದಿಂದ ಎರಡು ವರ್ಷದ ಹಿಂದೆ ಬನಹಟ್ಟಿ ಗುಂಡಯ್ಯನ ಬಾವಿ ಪಕ್ಕದ ಬಯಲು ಪ್ರದೇಶದಲ್ಲಿ ಮೂರು ಕೊಠಡಿ ನಿರ್ವಿುಸಲಾಗಿದೆ. ಆದರೆ ಈಗಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಈ ಮೂರು ಕೊಠಡಿ ಸಾಲುವುದಿಲ್ಲ. ಅದೇ ಸ್ಥಳದಲ್ಲಿ ಇನ್ನೂ ಐದು ಕೊಠಡಿ ನಿರ್ವಿುಸಿದರೆ ಮಾತ್ರ ಸಮಸ್ಯೆಯಿಂದ ಮುಕ್ತಿ ಹೊಂದಲು ಸಾಧ್ಯ ಎಂಬುದು ಪಾಲಕರ ಅಭಿಪ್ರಾಯ.

ಬೆಳಗಿನ ಜಾವ 8 ಗಂಟೆಗೆ ಕಾಲೇಜು ಆರಂಭವಾದರೆ ನಾವು 7 ಗಂಟೆಗೆ ಬಂದು ಸ್ಥಳ ಹಿಡಿಯಬೇಕು. ತಡಮಾಡಿ ಬಂದರೆ ಹೊರಗೆ ಅಥವಾ ನೆಲದ ಮೇಲೆ ಕುಳಿತುಕೊಳ್ಳುವ ಪರಿಸ್ಥಿತಿ ಇದೆ. ಸರ್ಕಾರ ಶೀಘ್ರ ಹೆಚ್ಚುವರಿ ಕೊಠಡಿ ವ್ಯವ್ಯಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲಿದೆ.

| ಶ್ರೀಶೈಲ ಹೊಳಪ್ಪಗೋಳ ವಿದ್ಯಾರ್ಥಿ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...