More

    ಸಚಿವ ಸಿ.ಸಿ.ಪಾಟೀಲ ಅವರಿಂದ ಶಾಲಾ ಕೊಠಡಿಗಳ ಉದ್ಘಾಟನೆ

    ಗದಗ: ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಭವ್ಯ ಭಾರತದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

    ತಾಲೂಕಿನ ಲಕ್ಕುಂಡಿ ಗ್ರಾಮದ ಸರಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಿದ 4 ಶಾಲಾ ಕೊಠಡಿಗಳನ್ನು ಗುರುವಾರದಂದು ಉದ್ಘಾಟನೆಗೊಳಿಸಿ ಅವರು ಮಾತನಾಡಿದರು.  

    ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಶ್ಯವಿದ್ದ ಕೊಠಡಿಗಳನ್ನು ಉದ್ಘಾಟಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳನ್ನು ಕೇವಲ ಅಂಕ ಗಳಿಕೆಗಷ್ಟೇ ಸೀಮಿತವಾಗಿರಿಸದೇ, ಮೌಲ್ಯಾಧಾರಿತ ಶಿಕ್ಷಣ ನೀಡಿ ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಶ್ರಮ ವಹಿಸಬೇಕು. ವಿದ್ಯಾರ್ಥಿಗಳು ಕೂಡ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಾಧನೆ ಮಾಡುವ ಮೂಲಕ ಕಲಿತ ಶಾಲೆ, ಕಲಿಸಿದ ಶಿಕ್ಷಕರ ಹೆಸರನ್ನು ತರಬೇಕು ಎಂದು ಹಾರೈಸಿದರು.

    ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಗ್ರಾಪಂ ಅಧ್ಯಕ್ಷೆ ಲಲಿತಾ ಗದಗಿನ, ಉಪಾಧ್ಯಕ್ಷ ರೇವಣಸಿದ್ದಪ್ಪ ಮುಳಗುಂದ, ಪಿಡಿಒ ಶಿವಲೀಲಾ ಅಂಗಡಿ,   ದತ್ತಣ್ಣ ಜೋಶಿ ಸೇರಿ ಗ್ರಾಮದ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts