ಶಾಲೆಯಲ್ಲಿ ಸರಸ್ವತಿ ಪೂಜೆ

ಬೈಲಹೊಂಗಲ: ಶಿಕ್ಷಣ ಅಭಿವೃದ್ಧಿಗೆ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಶ್ರಮಪಟ್ಟು ಉತ್ತಮ ವಿದ್ಯಾರ್ಜನೆ ಪಡೆದು ತಮ್ಮ ಜೀವನ ಕಟ್ಟಿಕೊಳ್ಳಬೇಕು ಎಂದು ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಗಂಗಾಧರ ವಿರಕ್ತಮಠ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ ಪ್ರಾಚಾರ್ಯ ಎಸ್.ಎಂ.ಸಿದ್ದನಾಯ್ಕ ಹೇಳಿದ್ದಾರೆ.

ಶಾಲೆ ಪ್ರಾರಂಭೋತ್ಸವ ನಿಮಿತ್ತ ಬುಧವಾರ ಸರಸ್ವತಿ ಪೂಜೆ ಸಲ್ಲಿಸಿ, ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪಾಲಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದರು. ಮುಖ್ಯೋಪಾಧ್ಯಾಯನಿ ಮಮತಾ ಪೂಜಾರ, ಸಿಬ್ಬಂದಿ, ಮಕ್ಕಳು ಇದ್ದರು.

Leave a Reply

Your email address will not be published. Required fields are marked *