More

    ಶೈಕ್ಷಣಿಕ ಕಾರ್ಯಕ್ರಮಕ್ಕೆ ಮಾತ್ರ ಶಾಲಾ ವೇದಿಕೆ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ

    ಬೆಂಗಳೂರು: ಶಾಲಾ ವೇದಿಕೆಗಳನ್ನು ಶೈಕ್ಷಣಿಕ ಕಾರ್ಯ ಕ್ರಮದ ಹೊರತಾಗಿ ಬೇರೆ ಖಾಸಗಿ ಕಾರ್ಯಕ್ರಮಗಳಿಗೆ ನೀಡಬಾರದು. ಒಂದು ವೇಳೆ ನೀಡಿದರೆ ಶಾಲಾಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (ಎಸ್​ಡಿಎಂಸಿ) ಹೊಣೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಸುಂಕೇನಹಳ್ಳಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವೇದಿಕೆಯಲ್ಲಿ ಮಹಿಳಾ ಸಂಘಟನೆಯೊಂದು ಖಾಸಗಿ ಕಾರ್ಯಕ್ರಮಕ್ಕೆ ವೇದಿಕೆಯನ್ನು ಬಾಡಿಗೆ ಪಡೆದು ಅಸಭ್ಯ ನೃತ್ಯಗಳನ್ನು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಘಟನೆಯಲ್ಲಿ

    ಶಾಲಾ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ಪಾತ್ರವಿಲ್ಲ ಎಂಬುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಶಾಲಾ ವೇದಿಕೆಗಳ ಕುರಿತು ಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.

    ಖಾಸಗಿ ಕಾರ್ಯಕ್ರಮಕ್ಕೆ ಶಾಲೆಯ ಎಸ್​ಡಿಎಂಸಿ ಅಧ್ಯಕ್ಷರು, ಸದಸ್ಯರು ಮುಖ್ಯ ಶಿಕ್ಷಕರು ವೇದಿಕೆ ನೀಡಬಾರದಿತ್ತು. ನೀಡಿದ ಬಳಿಕ ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಬೇಕಿತ್ತು. ಈ ಕೆಲಸ ಮಾಡದಿದ್ದರಿಂದ ಮಹಿಳಾ ಸಂಘಟನೆ ಪ್ರದರ್ಶಿಸಿದ ನೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದ್ದರಿಂದ ಶಾಲಾ ಮುಖ್ಯಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು.

    ನೋಟಿಸ್​ಗೆ ಮುಖ್ಯಶಿಕ್ಷಕರು ಉತ್ತರಿಸಿದ್ದು, ಕಾರ್ಯ ಕ್ರಮದಲ್ಲಿ ಶಿಕ್ಷಕಿಯರು ಪಾಲ್ಗೊಂಡಿಲ್ಲ ಎಂದು ಸ್ಪಷ್ಟಪಡಿಸಿ ದ್ದಾರೆ. ಜತೆಗೆ ಮಹಿಳಾ ಸಂಘಟನೆಯೊಂದು ಕಾರ್ಯಕ್ರಮ ಆಯೋಜಿಸಿತ್ತು. ವರ್ಷಾಚರಣೆ ಸಂಭ್ರಮದ ಹಿನ್ನೆಲೆಯಲ್ಲಿ ನೃತ್ಯ ಪ್ರದರ್ಶಿಸಿದ್ದಾಗಿ ತಪ್ಪೊಪ್ಪಿಗೆ ಪತ್ರ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts