More

    ಬೆಂಗಳೂರು ಕಂಬಳ ವೀಕ್ಷಣೆಗೆ ವಿದ್ಯಾರ್ಥಿಗಳು ದೌಡು!

    ಬೆಂಗಳೂರು: ಬೆಂಗಳೂರು ಕಂಬಳವನ್ನು ಕಣ್ತುಂಬಿಕೊಳ್ಳಲು ಮೊದಲ ದಿನ 1.5 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು. ಅದರಲ್ಲೂ ನೆಲಮಂಗಲದ ಬಸವೇಶ್ವರ ಇಂಗ್ಲೀಷ್​ ಹೈಸ್ಕೂಲ್​ನಿಂದ ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಬಂದಿದ್ದರು. ಕಂಬಳ ಕರಾವಳಿ ಭಾಗದ ಕ್ರೀಡೆಯಾಗಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಗೆ ಇದು ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲ.

    ಈ ಕ್ರೀಡೆಯ ಬಗ್ಗೆ ಎಲ್ಲ ವಿದ್ಯಾರ್ಥಿಗಳಿಗೂ ತಿಳಿಯಬೇಕು ಎಂಬ ಕಾರಣಕ್ಕೆ ನಮ್ಮ ಶಾಲೆಯ ವಿದ್ಯಾರ್ಥಿಗಳನ್ನು ಅರಮನೆ ಮೈದಾನಕ್ಕೆ ಕರೆದುಕೊಂಡು ಬಂದಿದ್ದೇವೆ ಎಂದು ಶಾಲೆಯ ಪ್ರಾಂಶುಪಾಲ ಕೆಂಪಣ್ಣ ಪ್ರತಿಕ್ರಿಯಿಸಿದ್ದಾರೆ.

    ಕಂಬಳ ಮೈದಾನದ ಒಳಭಾಗಕ್ಕೆ ಆಗಮಿಸುತ್ತಿದ್ದಂತೆ ಕರಾವಳಿ ಭಾಗದ ಹಳ್ಳಿಯೊಂದಕ್ಕೆ ಭೇಟಿ ಕೊಟ್ಟಂತಹ ಅನುಭವವಾಗುತ್ತದೆ. ಸಿನಿಮಾ, ಸಾಮಾಜಿಕ ಜಾಲತಾಣದ ಮೂಲಕ ಕಂಬಳವನ್ನು ಕಂಡಿದ್ದ ಮಂದಿ, ಇದೇ ಮೊದಲ ಬಾರಿಗೆ ನೇರವಾಗಿ ಕೋಣಗಳ ಓಟವನ್ನು ಕಣ್ತುಂಬಿಕೊಂಡರು.

    ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿದೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಶ್ಚರ್ಯ ಪಟ್ಟಿದ್ದರು. ರಾಜಧಾನಿಯಲ್ಲಿ ನೆಲೆಸಿರುವ ಕರಾವಳಿ ಭಾಗದ ಮಂದಿಯಲ್ಲಿ, ಅರ್ರೆ, ನಮ್ಮೂರಿನಲ್ಲಿ ನಡೆಯುವ ಜಾನಪದ ಕ್ರೀಡೆ, ಇಲ್ಲಿ ನಡೆಸಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು, ಬೆಂಗಳೂರು ಕಂಬಳಕ್ಕೆ ಮೊದಲ ದಿನ ಬೆಳಗ್ಗಿನಿಂದಲೇ ಸಾಲು ಸಾಲಾಗಿ ಜನರು ಬಂದಿದ್ದಾರೆ. ಅರಮನೆ ಮೈದಾನದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಕಂಡು ಎಲ್ಲರೂ ಅಚ್ಚರಿ ಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts