ಮದ್ಯ ಸೇವಿಸಿ ವಿದ್ಯಾರ್ಥಿಗಳಿಗೆ ನಿಂದನೆ; ಶಾಲಾ ಶಿಕ್ಷಕ ಅಮಾನತು

Untitled design - 2023-08-30T105947.733
Published on

ಉತ್ತರಾಖಂಡ್‌: ಮದ್ಯದ ಅಮಲಿನಲ್ಲಿ ಶಾಲೆಗೆ ಆಗಮಿಸುತ್ತಿದ್ದ ಶಿಕ್ಷಕ, ತರಗತಿಯ ವಿದ್ಯಾರ್ಥಿಗಳಿಗೆ ನಿಂದಿಸಿದ ಬಗ್ಗೆ ಮಾಹಿತಿ ಪಡೆದ ಶಾಲಾ ಆಡಳಿತ ಮಂಡಳಿ, ಇದೀಗ ಆತನನ್ನು ಕೆಲಸದಿಂದ ಅಮಾನತುಗೊಳಿಸಿದೆ.

ಉತ್ತರಾಖಂಡ್​ನ ಪೌರಿಯ ರಿಖ್ನಿಖಾಲ್‌ನ ಪ್ರಾಥಮಿಕ ಶಾಲೆಯೊಂದರಲ್ಲಿ ಈ ಘಟನೆ ವರದಿಯಾಗಿದ್ದು, ಶಿಕ್ಷಕ ಮದ್ಯ ಸೇವಿಸಿದ ಅಮಲಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ನಿಂದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಸಂದರ್ಭಗಳು ಎದುರಾಗಿತ್ತು ಎಂದು ಹೇಳಲಾಗಿದೆ. ಶಿಕ್ಷಕನನ್ನು ದೇವೇಂದ್ರ ಲಾಲ್ ಎಂದು ಗುರುತಿಸಲಾಗಿದ್ದು, ಸದ್ಯ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಕುಡಿದ ಅಮಲಿನಲ್ಲಿ ಶಾಲೆಗೆ ಆಗಮಿಸುವ ಶಿಕ್ಷಕ, ವಿದ್ಯಾರ್ಥಿಗಳನ್ನು ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಾತನಾಡಿದ ಅಧಿಕಾರಿಗಳೊಬ್ಬರು, "ಈ ವರ್ಷದ ಜನವರಿ ಮತ್ತು ಮೇ ತಿಂಗಳಲ್ಲಿ ಶಿಕ್ಷಕರ ವರ್ತನೆಗೆ ಸಂಬಂಧಿಸಿದಂತೆ ಹಲವಾರು ಲಿಖಿತ ಎಚ್ಚರಿಕೆಗಳನ್ನು ನೀಡಲಾಗಿತ್ತು. ಶಿಕ್ಷಕನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳು ಒದಗಿದ ನಂತರವೇ, ಆತನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಹೇಳಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net