More

    ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಿದ್ಯಾ ಸರ್ಕಾರ? ಶಿಕ್ಷಣ ಸಚಿವರ ಪ್ರತಿಕ್ರಿಯೆ ಹೀಗಿದೆ…

    ಬೆಂಗಳೂರು: ಶಾಲೆ ಆರಂಭವಾಗುತ್ತಿದ್ದಂತೆ ಪಠ್ಯ ಪುಸ್ತಕ ಪರಿಷ್ಕರಣೆ ಆಗಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ. ಈ ಮೂಲಕ ಹೊಸದಾಗಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಠ್ಯ ಪರಿಷ್ಕರಣೆ ಮಾಡಲು ಮುಂದಾಗಿದೆಯಾ ಎಂಬ ಗೊಂದಲ ಇದೀಗ ಸಾರ್ವಜನಿಕರಲ್ಲಿ ಮೂಡಿದೆ.

    ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್ ಪಠ್ಯ ಪರಿಷ್ಕರಣೆಗೆ ಸೂಚನೆ ನೀಡಿದ್ದರು. ಅದರಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯ ಪರಿಷ್ಕರಣೆ ಮಾಡಿ, ಕೆಲ ಪಠ್ಯಗಳನ್ನು ತೆಗೆದು, ಹೊಸ ಪಠ್ಯಗಳನ್ನು ಸೇರ್ಪಡೆಗೊಳಿಸಿತ್ತು. ಇದು ರಾಜಕೀಯವಾಗಿ ಹಲವು ಆರೋಪ-ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು.

    ಇದನ್ನೂ ಓದಿ: ಕಾಂಗ್ರೆಸ್​​ ನಾಯಕರು ದೇಶಭಕ್ತಿಯನ್ನು ಆರ್​ಎಸ್​​ಎಸ್​​ನಿಂದ ಕಲಿಯಲಿ!

    20ಕ್ಕೂ ಹೆಚ್ಚು ಸಾಹಿತಿಗಳಿಂದ ಮನವಿ

    ಇದೀಗ ಕಳೆದ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಠ್ಯ ಪರಿಷ್ಕರಣೆ ಕೈಬಿಡುವಂತೆ ಸಮಾನ ಮನಸ್ಕರ ಒಕ್ಕೂಟದ ಅಧ್ಯಕ್ಷ ಡಾ.ಎಸ್.ಜಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಸುಮಾರು 20 ಕ್ಕೂ ಹೆಚ್ಚು ಸಾಹಿತಿಗಳು ಸಹಿ ಮಾಡಿ, ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯವನ್ನ ಮುಂದುವರಿಸಿ ಮನವಿ ಸಲ್ಲಿಸಿದ್ದಾರೆ.

    ಈಗಾಗಲೇ ಶಿಕ್ಷಣ ಇಲಾಖೆ ಪಠ್ಯ ಪರಿಷ್ಕರಣೆ ‌ಮಾಡಿರುವ ಪಠ್ಯಪುಸ್ತಕ ಮುದ್ರಣಗೊಂಡಿದ್ದು, ಶಾಲೆಗಳಿಗೂ ಸರಬರಾಜು ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 72 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿವೆ. 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ.

    ಇದನ್ನೂ ಓದಿ: ಸಿಎಂ-ಡಿಸಿಎಂ ರಾಜ್ಯವನ್ನು ಅಶಾಂತಿಯ ಬೀಡಾಗಿ ಪರಿವರ್ತಿಸುತ್ತಿದ್ದಾರೆ: ಕಿಡಿಕಾರಿದ ರಾಜ್ಯ ಬಿಜೆಪಿ

    ಹಂತಹಂತವಾಗಿ ಪರಿಷ್ಕರಣೆ

    ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡುತ್ತಾ, ಈಗಾಗಲೇ ಈ ಬಗ್ಗೆ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ, ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಹಂತ ಹಂತವಾಗಿ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವೊಂದು ಸಲಹೆ ನೀಡಿದ್ದಾರೆ ಎಂದು ಹೇಳಿದರು.

    ವಿದ್ಯಾರ್ಥಿಗಳನ್ನು ನಾನೇ ಸ್ವಾಗತಿಸುತ್ತಿದ್ದೇನೆ….

    ಶಾಲಾ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ಎಲ್ಲಾ ರೀತಿಯ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಯಾವುದೇ ಗೊಂದಲಗಳಿಲ್ಲದೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಲಾಗುತ್ತಿದೆ. ನಾಳೆ ನಾನೇ ಶಿವಮೊಗ್ಗ ಗ್ರಾಮಾಂತರದಲ್ಲಿ ಶಾಲೆಗೆ ಭೇಟಿ ನೀಡಿ, ಮಕ್ಕಳನ್ನು ಬರಮಾಡಿಕೊಳ್ಳುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲವೂ ಸಮಾರೋಪಾದಿಯಲ್ಲಿ ಸಾಗಿದ್ದು, ಜಾತಿ, ಧರ್ಮ ಮೀರಿದ ಶಿಕ್ಷಣ ವ್ಯವಸ್ಥೆ ಕರ್ನಾಟಕದಲ್ಲಿ ಇರುತ್ತದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts