More

    ಶಾಲಾ ಸಮಯ ಬದಲಾವಣೆ ಕುರಿತಂತೆ ಇಂದು ಮಹತ್ವದ ಬೆಳವಣಿಗೆ; ಇಂದೇನಾಯ್ತು? ನಾಳೆ ಏನಾಗಬಹುದು?

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರದಟ್ಟಣೆ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಶಾಲಾ ಸಮಯವನ್ನು ಬದಲಿಸುವ ಕುರಿತು ಶಿಕ್ಷಣ ಇಲಾಖೆ ಚಿಂತನೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇದು ನಾಳೆಯ ಬೆಳವಣಿಗೆಯ ಮೇಲೂ ನಿರ್ಣಾಯಕ ಪರಿಣಾಮ ಬೀರುವ ಸಾಧ್ಯತೆ ಗೋಚರಿಸಿದೆ.

    ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ತಗ್ಗಿಸಲು ಶಾಲಾ ಸಮಯವನ್ನು ಬದಲಾವಣೆ ಮಾಡುವುದು ಸೂಕ್ತ ಎಂದು ಅಂದುಕೊಂಡಿರುವ ಶಿಕ್ಷಣ ಇಲಾಖೆ ಆ ನಿಟ್ಟಿನಲ್ಲಿ ಈಗಾಗಲೇ ಮುಂದಡಿ ಇಟ್ಟಿದೆ. ಅದರಲ್ಲೂ ಕರ್ನಾಟಕ ಹೈಕೋರ್ಟ್‌ನ ಸಲಹೆ ಮೆರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದಾದ್ಯಂತ ಶಾಲಾ ಸಮಯ ಪರಿಷ್ಕರಣೆ ಕುರಿತು ಚರ್ಚಿಸಲು ಸಭೆ ಕರೆದಿತ್ತು.

    ಇದೀಗ ಇದೇ ವಿಚಾರವಾಗಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಶಾಲಾ ಸಮಯ ಬದಲಾವಣೆ ಮಾಡದಿರುವಂತೆ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮಾತ್ರವಲ್ಲದೆ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ಕೂಡ ಸಲಹೆ ನೀಡಿವೆ. ಇನ್ನೊಂದೆಡೆ ನಾಳೆ ಶಾಲಾ ಸಮಯ ಬದಲಾವಣೆ ವಿಚಾರವಾಗಿ ಹೈಕೋರ್ಟ್​ನಲ್ಲಿ ವಿಚಾರಣೆಯೂ ನಡೆಯಲಿದೆ.

    ಇಂದು ಶಾಲೆಗಳ ಆಡಳಿತ ಮಂಡಳಿ, ಸಾರಿಗೆ ಮತ್ತು ಪೊಲೀಸ್ ಇಲಾಖೆಯವರು ನೀಡಿರುವ ಸಲಹೆಯನ್ನೇ ನಾಳೆ ಹೈಕೋರ್ಟ್​​ನಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಶಿಕ್ಷಣ ಇಲಾಖೆ ಮಂಡನೆ ಮಾಡಲಿದೆ. ಬಳಿಕ ಹೈಕೋರ್ಟ್ ನಿರ್ದೇಶನದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

    ಖಿನ್ನತೆ ತಲೆಯ ಸಮಸ್ಯೆ, ಅದಾಗ್ಯೂ ಪರಿಹಾರ ಕಾಲುಗಳಲ್ಲಿದೆ!; ಅಧ್ಯಯನದಲ್ಲಿ ಬಹಿರಂಗ

    ಇವರೆಲ್ಲ ದುಡಿಯದೇ ಕೋಟ್ಯಧಿಪತಿಗಳು; ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿದ್ರೆ ಕೋಟಿಗಟ್ಟಲೆ ಹಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts