

ಕುಂದಾಪುರ: ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಒಂದು ತಿಂಗಳ ಹಿಂದೆ ಬೆಳ್ಳಂಬೆಳಗ್ಗೆ ಕುಂದಾಪುರ ತಾಲೂಕಿನ ಬಹುತೇಕ ಎಲ್ಲೆಡೆ ಪೊಲೀಸರು ನಡೆಸಿದ ಕಾರ್ಯಾಚರಣೆ ದಿನಕ್ಕೆ ವಾತ್ರ ಸೀಮಿತವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.
ಶಾಲಾ ವಾಹನ, ಆಟೋರಿಕ್ಷಾ ಮತ್ತಿತರ ವಾಹನಗಳಲ್ಲಿ ಮಿತಿಮೀರಿ ವಿದ್ಯಾರ್ಥಿಗಳನ್ನು ತುಂಬಿಸುತ್ತಿರುವ ಮತ್ತು ಅತಿ ವೇಗದಿಂದ ಸಂಚರಿಸುತ್ತಿರುವ ಬಗ್ಗೆ ಅನೇಕ ದೂರುಗಳು ಬಂದಿದ್ದ ಹಿನ್ನೆಲೆ ಪರಿಶೀಲನೆ ನಡೆಸಿದ್ದ ಪೊಲೀಸರು ಎಚ್ಚರಿಕೆ ನೀಡಿದ್ದರು.
ಆದರೆ ಇತ್ತೀಚೆಗೆ ಮತ್ತೆ ಮಿತಿಮೀರಿದ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು ಯಾವುದೇ ಕ್ರಮಕೈಗೊಳ್ಳದೆ ಸುಮ್ಮನಿರುವುದು ಜನರಲ್ಲಿ ಸಂಶಯಕ್ಕೆ ಎಡೆ ವಾಡಿಕೊಟ್ಟಂತಿದೆ.
ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ನಡೆಸಿದ ಕಾರ್ಯಾಚರಣೆ ಕೇವಲ ಒಂದು ದಿನಕ್ಕೆ ವಾತ್ರ ಸೀಮಿತವಾಗಿರದೆ ಇದು ನಿರಂತರವಾಗಿ ನಡೆಯುತ್ತಿರಬೇಕು. ಮಿತಿಮೀರಿದ ಮತ್ತು ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿರುವ ಬಸ್, ಆಟೋರಿಕ್ಷಾ ಮತ್ತು ಶಾಲಾ ವಾಹನಗಳನ್ನು ತಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಖಾಸಗಿ ಮತ್ತು ಸರ್ಕಾರಿ ಬಸ್‌ಗಳಲ್ಲಿ ಮಿತಿ ಮೀರಿದ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ತುಂಬಿಸಿಕೊಂಡು ಸಂಚರಿಸುತ್ತಿರುವುದು, ವಿದ್ಯಾರ್ಥಿಗಳು ುಟ್‌ಬೋರ್ಡ್ ಮೇಲೆ ಸಂಚರಿಸುತ್ತಿರುವ ಹಾಗೂ ಆಟೋರಿಕ್ಷಾ ಮತ್ತಿತರ ವಾಹನಗಳಲ್ಲಿ ಕೂಡ ಕಾನೂನುಬಾಹಿರವಾಗಿ ಮಿತಿಮೀರಿದ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೊಂಡೊಯ್ಯಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು. -ನವೀನ್ ಗಂಗೊಳ್ಳಿ, ಸಾಮಾಜಿಕ ಕಾರ್ಯಕರ್ತ, ಗಂಗೊಳ್ಳಿ https://www.vijayavani.net/tuluvere-minadana-by-tuluvere-kala-in-mumbai https://www.vijayavani.net/joining-the-army-requires-hard-work-and-determination