ವಸತಿ ಶಾಲೆಯ ಗೋಡೆ ಕುಸಿತ; ಓರ್ವ ಬಾಲಕ ಮೃತ್ಯು!

Untitled design - 2023-09-22T152346.703
Published on

ರಾಮನಗರ: ಸರ್ಕಾರಿ ವಸತಿ ಶಾಲೆಯ ಗೋಡೆ ಕುಸಿದು 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ವರದಿಯಾಗಿದೆ.

ಶಾಲೆಯ ಗೋಡೆ ಕುಸಿದ ಪರಿಣಾಮ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಓರ್ವ ಬಾಲಕ ಮತ್ತು ಆತನ ಇಬ್ಬರು ಸಹ ಸಹಪಾಠಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಈ ಘಟನೆ ಕರ್ನಾಟಕದ ರಾಮನಗರ ಜಿಲ್ಲೆಯ ಮೊರಾರ್ಜಿ ದೇಸಾಯಿ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದ್ದು, ಮೃತ ವಿದ್ಯಾರ್ಥಿಯನ್ನು ಕೌಶಿಕ್ ಗೌಡ ಎಂದು ಗುರುತಿಸಲಾಗಿದೆ.

ಗೋಡೆ ಏಕಾಏಕಿ ಕುಸಿದ ಪರಿಣಾಮ ಸ್ಥಳದಲ್ಲಿದ್ದ ಬಾಲಕನ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಇತರ ವಿದ್ಯಾರ್ಥಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಘಟನೆಗೆ ಪ್ರತಿಕ್ರಿಯಿಸಿರುವ ಮಾಜಿ ಬಿಜೆಪಿ ಸಚಿವ ಅಶ್ವಥ್ ನಾರಾಯಣ್, "ಸರ್ಕಾರಿ ಅಧಿಕಾರಿಗಳು ಸೇರಿದಂತೆ ಎಲ್ಲ ಜವಾಬ್ದಾರಿಯುತರನ್ನು ತರಾಟೆಗೆ ತೆಗೆದುಕೊಳ್ಳಬೇಕು. ಕಳಪೆ ನಿರ್ವಹಣೆಯಿಂದಾಗಿ ಅಮಾಯಕರ ಜೀವ ಬಲಿಯಾಗಿದೆ" ಎಂದು ಹೇಳಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net