More

    ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಹೊಸ ದಾಖಲೆ: ಸಚಿವ ಸಿ.ಸಿ.ಪಾಟೀಲರ ಹೇಳಿಕೆ

    ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಸುಸಜ್ಜಿತ ಶಾಲೆ, ಪ್ರೌಢಶಾಲೆಗಳ ಕಟ್ಟಡಗಳ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗನವಾಡಿ ಕಟ್ಟಡಗಳ ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯಿಂದ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

    ಇಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯು ಈ ಕಟ್ಟಡಗಳನ್ನು ನಿರ್ಮಿಸುವ ಜವಾಬ್ಧಾರಿ ವಹಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 756 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ 3423 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಈ ಪೈಕಿ ಈಗಾಗಲೇ 2684 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಈ ಯೋಜನೆಯನ್ನು ನಬಾರ್ಡನ ಆರ್.ಐ.ಡಿ.ಎಫ್-25 ಅನ್ವಯ ಜಾರಿಗೊಳಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 137 ಕೋಟಿ ರೂ. ವೆಚ್ಚದಲ್ಲಿ ಒಟ್ಟು 8 ಸುಸಜ್ಜಿತ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದ್ದು, ಈ ಪೈಕಿ 525 ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಮುಂದಿನ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಿ.ಸಿ.ಪಾಟೀಲ್ ವಿವರಿಸಿದ್ದಾರೆ.

    ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಹೊಸ ಶೈಕ್ಷಣಿಕ ಕ್ರಾಂತಿಗೆ ಅವಕಾಶವಾಗುವ ನಿಟ್ಟಿನಲ್ಲಿ ಈ ಯೋಜನೆಯು ತುಂಬಾ ಸಹಕಾರಿಯಾಗಲಿದೆ ಎಂಬುದಾಗಿ ಸಚಿವರು ಆಶಾವಾದ ವ್ಯಕ್ತಪಡಿಸಿದರು.

    ಊಟದಲ್ಲಿ ಪುರುಷರ ಗುಪ್ತಾಂಗದ ತುಂಡು ಕಂಡು ಬೆಚ್ಚಿಬಿದ್ದ ಮಹಿಳೆ! ವೈರಲ್​ ಆಯ್ತು ವಿಡಿಯೋ!

    ಕೋರ್ಟ್​ ಆದೇಶಕ್ಕೂ ಕ್ಯಾರೆ ಎನ್ನದ ಗಂಡ: ಅನಾಥ ಮಹಿಳೆಯ ಕತೆ ಕೇಳಿದ್ರೆ ಮನಕಲಕುತ್ತೆ

    VIDEO: ಮದುವೆಯ ಬೃಹದಾಕಾರದ ಕೇಕ್‌ ಕತ್ತರಿಸೋ ಮೊದಲೇ ಬಿದ್ದು ಚೆಲ್ಲಾಪಿಲ್ಲಿ! ಸಪ್ಲೈಯರ್‌ ಮಾಡಿದ್ದೇನು ನೋಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts