More

    ಶ್ರೀಲಂಕಾದಲ್ಲಿ ಪೂರ್ಣಪ್ರಮಾಣದಲ್ಲಿ ಶುರುವಾಗಿವೆ ಶಾಲೆಗಳು; ನಿಯಮಗಳು ಹೀಗಿವೆ….

    ಕೊಲಂಬೋ: ಕರೊನಾ ನಿಯಂತ್ರಣಕ್ಕಾಗಿ ಶ್ರೀಲಂಕಾದ್ಯಂತ ಕಳೆದ ನಾಲ್ಕು ತಿಂಗಳಿಂದ ಮುಚ್ಚಿದ್ದ ಶಾಲಾ-ಕಾಲೇಜುಗಳನ್ನು ಸೋಮವಾರ (ಆ.10) ಸಂಪೂರ್ಣವಾಗಿ ಪುನಾರಂಭಿಸಲಾಗಿದೆ.

    ಕಳೆದ ಮಾರ್ಚ್​ನಲ್ಲಿ ದ್ವೀಪರಾಷ್ಟ್ರದಲ್ಲಿ ಮೊದಲ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶೈಕ್ಷಣಿ ಸಂಸ್ಥೆಗಳನ್ನು ಮುಚ್ಚಲು ಆದೇಶಿಸಲಾಗಿತ್ತು.
    ಆದರೆ, ಜುಲೈನಲ್ಲಿ ಕೆಲ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಆದರೆ, ಎರಡನೇ ಹಂತದಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದೇ ವಾರದ ಬಳಿಕ ಮತ್ತೆ ಮುಚ್ಚಿಸಲಾಗಿತ್ತು.

    ಇದನ್ನೂ ಓದಿ; ಕಡತಗಳಿಗೆ ಸಹಿ ಹಾಕಲೆಂದೆ ಐಎಎಸ್ ಅಧಿಕಾರಿಯಾದೆ; ಅಪ್ಪನ ಕನಸು ನನಸಾದ ಸಾರ್ಥಕತೆ

    200ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳಲ್ಲಿ ಮಾರ್ಚ್​ಗಿಂತ ಮುಂಚೆ ಯಾವ ರೀತಿ ತರಗತಿಗಳನ್ನು ನಡೆಸಲಾಗುತ್ತಿತ್ತೋ ಈಗಲು ಅದೇ ಕ್ರಮದಲ್ಲಿ ತರಗತಿಗಳನ್ನು ನಡೆಸಬಹುದು. ಆದರೆ, ವಿದ್ಯಾರ್ಥಿಗಳ ನಡುವೆ ಕನಿಷ್ಠ 1 ಮೀಟರ್​ ಅಂತರ ಕಾಯ್ದುಕೊಳ್ಳಬೇಕು ಎಂದು ನಿಯಮ ವಿಧಿಸಲಾಗಿದೆ.

    ಇನ್ನು, 200ಕ್ಕೂ ಅಧಿಕ ಮಕ್ಕಳಿರುವ ಶಾಲೆಗಳಲ್ಲಿ ಯಾವ ತರಗತಿಗಳನ್ನು ಯಾವ ದಿನಗಳಂದು ನಡೆಸಬೇಕು ಎಂಬುದನ್ನು ಅವರೇ ನಿರ್ಧರಿಸಬೇಕು. ಆದರೆ, ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

    ಇದನ್ನೂ ಓದಿ; ದೀಪಾವಳಿ ವೇಳೆಗೆ 70 ಸಾವಿರ ರೂ.ಗೆ ತಲುಪುತ್ತೆ ಚಿನ್ನದ ಬೆಲೆ; ಬೇಡಿಕೆ ಕುಸಿದಿದ್ದರೂ ಆಗಸಕ್ಕೇಕೆ ಮುಖ ಮಾಡಿದೆ ಹಳದಿ ಲೋಹ

    ಸದ್ಯ ಶಾಲೆಗಳಲ್ಲಿನ ಕ್ಯಾಂಟೀನ್​ಗಳನ್ನು ತೆರೆಯಲು ಅವಕಾಶವಿಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಕೋವಿಡ್​ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಿ ಅನುಮತಿ ನೀಡಲಿದ್ದಾರೆ. ಶ್ರೀಲಂಕಾದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ ಕೇವಲ 2,844 ಆಗಿದ್ದು, ಈ ಪೈಕಿ 254 ಪ್ರಕರಣಗಳಷ್ಟೇ ಸಕ್ರಿಯವಾಗಿವೆ ಎಂದು ಮಾಹಿತಿ ನೀಡಲಾಗಿದೆ.

    ನೂರು ದಿನಗಳಿಂದ ಒಂದೂ ಕರೊನಾ ಕೇಸಿಲ್ಲ; ಜಗತ್ತೇ ನಿಬ್ಬೆರಗಾಗಿದೆ ಈ ಸಾಧನೆಗೆ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts