ವಿಜಯವಾಣಿ ಸುದ್ದಿಜಾಲ ಬ್ರಹ್ಮಾವರ
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬ್ರಹ್ಮಾವರ ಮತ್ತು ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕುಮಟ್ಟದ ಕ್ರೀಡಾಕೂಟ, ವಿಜ್ಞಾನ ಮೇಳ ಹಾಗೂ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಜರುಗಿತು.
ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿತ್ಯಾನಂದ ಬಿ.ಆರ್ ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಬ್ರಹ್ಮಾವರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರವೀಂದ್ರ ಉಪಾಧ್ಯ, ಉಪಪ್ರಾಂಶುಪಾಲೆ ಉಮಾ ಪಿ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ ವಿ, ಬ್ರಹ್ಮಾವರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ದೈಹಿಕ ಶಿಕ್ಷಕ ಜಗದೀಶ್ ಕೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹೇಶ ಐತಾಳ್, ಶಾರದಾ ವೈ ಉಪಸ್ಥಿತರಿದ್ದರು. ಭಾಗೀರತಿ ಆಚಾರ್ಯ ವಂದಿಸಿದರು. ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.