20.4 C
Bengaluru
Sunday, January 19, 2020

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು.

ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದರು. ಮಣ್ಣಿನ ಸವಕಳಿ ಹೆಚ್ಚುತ್ತಿದ್ದು, ಫಲವತ್ತತೆ ಕಳೆದುಕೊಳ್ಳುತ್ತಿದೆ. ಮಣ್ಣಿನಲ್ಲಿ ರಸಸಾರ ಮಟ್ಟ ತಟಸ್ಥವಾಗಿರಬೇಕು. ಇದರ ಸಮತೋಲನ ಕಾಯ್ದುಕೊಳ್ಳಲು ಪರಿಸರ ಸಂರಕ್ಷಣೆ ಮಾಡಬೇಕು. ಮಳೆ, ಗಾಳಿ ಹಾಗೂ ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿಯಾಗುತ್ತದೆ. ಮಣ್ಣು ಜೀವಂತ ಪದಾರ್ಥವಾಗಿದ್ದು, ಸಾವಯವ ಪದಾರ್ಥಗಳು ಮಣ್ಣಿಗೆ ಆಹಾರವಿದ್ದಂತೆ. ಮಣ್ಣಿಗೆ ಶಕ್ತಿ ನೀಡುವಂತಹ ಬೆಳೆಗಳ ಪಳಯುಳಿಕೆಗಳನ್ನು ಕೊಳೆಯಲು ಬಿಡುವ ಬದಲು ಸುಟ್ಟು ಹಾಕುತ್ತಿದ್ದೇವೆ. ಆದ್ದರಿಂದ ರೈತರು ಜಾನುವಾರು ಸಾಕಣೆ ಮಾಡಿ, ಸಗಣಿ ಗೊಬ್ಬರ ಮಾಡಿಕೊಳ್ಳಬೇಕು. ಸಹಜ ಕೃಷಿ, ಶೂನ್ಯ ಬಂಡವಾಳದ ಕೃಷಿ, ಅರಣ್ಯೀಕರಣ ಮಾಡುವ ಮೂಲಕ ಬರಡು ಭೂಮಿಗೆ ಹಸಿರು ಹೊದಿಕೆ ಹಾಕಬೇಕಾಗಿದೆ ಎಂದು ತಿಳಿಸಿದರು.

ಸಹಾಯಕ ಕೃಷಿ ಅಧಿಕಾರಿ ಎನ್.ವಿ.ಪ್ರಕಾಶ್ ಮಾತನಾಡಿ, ಪರಿಸರ ಹಾಳಾಗುತ್ತಿರುವುದರಿಂದ ಕುಡಿಯಲು ಶುದ್ಧ ನೀರು ಸಿಗದಂತಾಗಿದೆ. ಕಾರಣ ಮಣ್ಣನ್ನು ಸಂರಕ್ಷಣೆ ಮಾಡಬೇಕು. ಇನ್ನು ಮುಂದೆ ಮಣ್ಣು ಪರೀಕ್ಷೆ ಬಳಿಕವೇ ಅಗತ್ಯ ರಸಗೊಬ್ಬರ ನೀಡಲಾಗುತ್ತದೆ ಎಂದರು. ತಾಪಂ ಸದಸ್ಯ ಬಿ.ಚಿನ್ನಾಪ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಬಿಎಂ ಶಾಖೆ ವ್ಯವಸ್ಥಾಪಕ ಪ್ರಕಾಶ್, ಕೃಷಿ ಅಧಿಕಾರಿಗಳಾದ ಅರ್ಚನಾ, ಶ್ಯಾಂಸುಂದರ್, ಸಹಾಯಕ ಕೃಷಿ ಅಧಿಕಾರಿಗಳಾದ ಸಾವಿತ್ರಿ, ಪುಟ್ಟಪ್ಪ, ತಾಂತ್ರಿಕ ಅಧಿಕಾರಿ ಶ್ರವಣಕುಮಾರ್ ಹಾಗೂ ವಿವಿಧ ಗ್ರಾಮಗಳ ರೈತರು, ರೈತ ಅನುವುಗಾರರು ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...