ಕಾರಂಜಾ ಸಂತ್ರಸ್ತರಿಂದ ಅಹೋರಾತ್ರಿ ಹೋರಾಟ

ವಿಜಯವಾಣಿ ಸುದ್ದಿಜಾಲ ಬೀದರ್
ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅಹೋರಾತ್ರಿ ಹೋರಾಟ ಶನಿವಾರ 6ನೇ ದಿನಕ್ಕೆ ಕಾಲಿಟ್ಟಿದೆ.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಕಾರಂಜಾ ಸಂತ್ರಸ್ತರು, ಬೇಡಿಕೆ ಸಂಬಂಧ ಹಲವು ವರ್ಷಗಳಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದರು ಆಡಳಿತ ನಡೆಸುವವರು ಮಾತ್ರ ನಿದ್ರೆಗೆ ಜಾರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಹಾರಕ್ಕಾಗಿ ಕಳೆದ ವರ್ಷ ಡಿಸಿ ಕಚೇರಿ ಎದುರು 71 ದಿನ ಹೋರಾಟ ನಡೆಸಲಾಗಿತ್ತು. ನಂತರ ಸಿಎಂ ಸಮ್ಮುಖದಲ್ಲಿ ಸಭೆ ನಡೆಸಲಾಯಿತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಭರವಸೆ, ಆಶ್ವಾಸನೆ ಬಿಟ್ಟು ನಮಗೆ ಏನು ಸಿಕ್ಕಿಲ್ಲ ಎಂದು ದೂರಿದ್ದಾರೆ.

ಎಲ್ಲ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡುವವರೆಗೆ ಇಲ್ಲಿಂದ ಎದ್ದು ಹೋಗುವುದಿಲ್ಲ. ಹಿಂದಿನಂತೆ ಸಕರ್ಾರ, ಜನಪ್ರತಿನಿಧಿಗಳು ನಿರ್ಲಕ್ಷೃ ವಹಿಸಿದರೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ, ಕಾರ್ಯದಶರ್ಿ ನಾಗಶೆಟ್ಟೆಪ್ಪ ಹಚ್ಚಿ ರೇಕುಳಗಿ, ಸಂಜುಕುಮಾರ, ಸುಭಾಷ ಪಾಟೀಲ್, ರಾಜಪ್ಪ, ಅಶೋಕ, ಶಾಮರಾವ, ಅಮೃತರಾವ, ರಾಜಕುಮಾರ ಸೇರಿ ವಿವಿಧ ಹಳ್ಳಿಗಳ ಸಂತ್ರಸ್ತರು ಪಾಲ್ಗೊಂಡಿದ್ದರು.