More

  ಬೆಂಗಳೂರಿನಿಂದ ಅಯೋಧ್ಯೆಗೆ ಶುರುವಾಯ್ತು ವಿಮಾನ ಸೇವೆ; ಇಲ್ಲಿದೆ ಸಂಪೂರ್ಣ ವಿವರ

  ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಧಾರ್ಮಿಕ ವಿಧಿವಿಧಾನಗಳು ಅರಂಭಗೊಂಡಿವೆ. ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದು, ಅಯೋಧ್ಯೆಯತ್ತ ಹೊರಟಿದ್ದಾರೆ. 

  ಇದೀಗ ಅದಕ್ಕೆ ಪೂರಕವೆಂಬಂತೆ ಅಯೋಧ್ಯೆ ಮತ್ತು ಬೆಂಗಳೂರು, ಅಯೋಧ್ಯೆ ಮತ್ತು ಕಲ್ಕತ್ತಾ ಸಂಪರ್ಕಿಸುವ ವಿಮಾನಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ ನೀಡಿದ್ದಾರೆ.

  ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಂಧಿಯಾ, ಆಯಾ ವಿಮಾನಗಳು ವಾರಕ್ಕೆ 3 ಬಾರಿ ಹಾರಾಟ ನಡೆಸಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಉತ್ತರ ಪ್ರದೇಶವು ಅಭಿವೃದ್ಧಿಯ ಹೊಸ ಎತ್ತರವನ್ನು ಮುಟ್ಟಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಲಕ್ನೋ ಮತ್ತು ವಾರಣಾಸಿಯಿಂದ ದೇಶ ಮತ್ತು ವಿದೇಶ ವಿಮಾನ ಸೇವೆಯನ್ನು ಒದಗಿಸಲಾಗುವುದು. ಇದೇ ಮಾರ್ಚ್​ 1 ರಿಂದ ಹೈದರಾಬಾದ್‌ ಟು ವಾರಣಾಸಿಗೆ ವಿಮಾನ ಸಂಪರ್ಕ ಕಲ್ಪಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

  ಇದನ್ನೂ ಓದಿ: ರಾಷ್ಟ್ರಪ್ರೇಮ ಕೆಲವರ ಭಾಷಣಕ್ಕಷ್ಟೇ ಸೀಮಿತವಾಗಿದೆ; ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

  ಬೆಂಗಳೂರು ಹಾಗೂ ಅಯೋದ್ಯೆ ನಡುವೆ ಸಂಚರಿಸುವ ವಿಮಾನದ ಟಿಕೆಟ್​ ದರ 10ರಿಂದ 20 ಸಾವಿರ ರೂಪಾಯಿ ಇದೆ ಎಂದು ಹೇಳಲಾಗಿದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಮಾನ ಟಿಕೆಟ್​ ದರದಲ್ಲಿ ಏರಿಕೆಯಾಗಿದ್ದು, ಜನವರಿ 20ಕ್ಕೂ ಮುನ್ನವೇ ಎಲ್ಲಾ ವಿಮಾನಗಳ ಟಿಕೆಟ್ ಈಗಾಗಲೇ ಬುಕ್ ಆಗಿವೆ.

  ರಾಮಮಂದಿರದ ಉದ್ಘಾಟನೆ ದಿನದಂದು ಆಹ್ವಾನಿತರನನ್ಉ ಹೊರತುಪಡಿಸಿ ಉಳಿದವರಿಗೆ ಪ್ರವೇಶವಿಲ್ಲ ಎಂದು ಈಗಾಗಲೇ ಮಂಡಳಿ ಸ್ಪಷ್ಟಪಡಿಸಿದೆ. ಇದರ ಹೊರತ್ತಾಗಿಯೂ ಜನರು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ಬಯಸಿದ್ದಾರೆ. ಇ ಹಿನ್ನಲೆಯಲ್ಲಿ ಅಯೋದ್ಯೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts