More

    ಅಪಘಾತದಲ್ಲಿ ಸ್ಕೂಟರ್ ಸವಾರ ಮೃತ್ಯು

    ಬಂಟ್ವಾಳ: ಬೋರ್‌ವೆಲ್ ಕೊರೆಯುವ ಯಂತ್ರವಿರುವ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಅಲ್ಲಿಪಾದೆ ಎಂಬಲ್ಲಿ ನಡೆದಿದೆ.

    ನಾವೂರ ಸಮೀಪದ ಪರಾರಿ ಜಯ ಪೂಜಾರಿ (55) ಮೃತಪಟ್ಟ ವ್ಯಕ್ತಿ. ಅವರ ಮಗ ರಕ್ಷಿತ್ ಸಹಸವಾರನಾಗಿದ್ದು, ಈತನಿಗೆ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್‌ನಲ್ಲಿ ತಂದೆ ಮಗ ಸಂಚರಿಸುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts