

ಬಂಟ್ವಾಳ: ಫರಂಗಿಪೇಟೆ ಸಮೀಪ ವಾರಿಪಳ್ಳ ಬಳಿಯ 10ನೇ ಮೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳಿಂಜಬೈಲು ನಿವಾಸಿ ಇಬ್ರಾಹಿಂ ಎಂಬುವರು ಮೃತಪಟ್ಟಿದ್ದಾರೆ. ಅವರು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹಿಂದಿನಿಂದ ಕಂಟೇನರ್ ಡಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆೆಯಲ್ಲಿ ಪ್ರಕರಣ ದಾಖಲಾಗಿದೆ.