ಪಿಕಪ್ ಡಿಕ್ಕಿಯಾಗಿ ಸ್ಕೂಟರ್ ಸವಾರರಿಗೆ ಗಾಯ

accident-15
Published on

ಕುಂದಾಪುರ: ಸ್ಕೂಟರ್‌ಗೆ ಪಿಕ್‌ಅಪ್ ಡಿಕ್ಕಿಯಾಗಿ ಸ್ಕೂಟರ್ ಸವಾರರಾದ ಗುಲ್ವಾಡಿ ಗ್ರಾಮದ ಮಹಮ್ಮದ್ ಆಫ್ರೀದ್ ಹಾಗೂ ಮಹಮ್ಮದ್ ಅರ್ಜಾನ್ ಎಂಬುವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸ್ಕೂಟರ್ ಸವಾರರು ತಲ್ಲೂರು ಕಡೆಯಿಂದ ನೇರಳಕಟ್ಟೆ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಪಿಕ್‌ಅಪ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net