

ಪಡುಬಿದ್ರಿ: ಮಂಗಳೂರಿನತ್ತ ಚಲಿಸುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಏಕಾಏಕಿ ರಸ್ತೆ ಮಧ್ಯೆದಲ್ಲಿ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟಿ ಕಾರಿಗೆ ಡಿಕ್ಕಿಯಾಗಿದೆ. ಸವಾರ ಮುಂಡ್ಕೂರಿನ ಸುವಿನ್ ಎಂಬುವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.