ಸ್ಕೂಟಿ ಸ್ಕಿಡ್, ಸವಾರಗೆ ಗಂಭೀರ ಗಾಯ

accident-15
Published on

ಸುಳ್ಯ: ಸ್ಕೂಟಿ ಸ್ಕಿಡ್ ಆಗಿ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಕೊಡಗು ಸಂಪಾಜೆ ಗ್ರಾಮದ ಪೆಟ್ರೋಲ್ ಪಂಪ್ ಬಳಿಯ ನಿವಾಸಿ ರಾಧಾಕೃಷ್ಣ ಎಂಬುವರು ರಾತ್ರಿ ಕಲ್ಲುಗುಂಡಿಯಿಂದ ಸಂಪಾಜೆಯ ತನ್ನ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಕೈಪಡ್ಕ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟಿ ಪಲ್ಟಿಯಾಗಿದ್ದು, ರಾಧಾಕೃಷ್ಣ ಅವರ ತಲೆ, ಮುಖ ಹಾಗೂ ಕೈ-ಕಾಲುಗಳಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರು ಸೇರಿ ಅವರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತಂದಾಗ, ತಲೆಗೆ ಗಂಭೀರ ಪ್ರಮಾಣದ ಗಾಯವಾಗಿರುವುದರಿಂದ ರಾತ್ರಿಯೇ ಆಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net