More

    ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಬೆಳಸಲು ಸಹಕಾರಿ

    ಸಿಂಧನೂರು:ವಿದ್ಯಾರ್ಥಿಗಳಲ್ಲಿ ಸೃಜನಶೀಲ ಗುಣ ಬೆಳೆಸುವಲ್ಲಿ ಹಸ್ತಪತ್ರಿಕೆಗಳ ಪಾತ್ರ ಹಿರಿದಾಗಿದೆಂದು ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಬೀರಪ್ಪ ಶಂಭೋಜಿ ಹೇಳಿದರು.

    ತಾಲೂಕಿನ ದುಗ್ಗಮ್ಮನಗುಂಡ ಗ್ರಾಮದಲ್ಲಿ ಶುಕ್ರವಾರ ಭಾರತ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಹಾಗೂ ತಾಲೂಕು ಘಟಕ, ಶ್ರೀ ಚಿಕ್ಕಯ್ಯ ಪಂಡಿತ್ ಕ್ಲಬ್ ಘಟಕದಿಂದ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು. ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯ ಹಾಗೂ ಆಟಗಳ ಮೂಲಕ ಕೌಶಲಗಳನ್ನು ಬೆಳೆಸುವ ಕಾರ್ಯ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಬೇಸಿಗೆ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

    ಸ್ಕೌಟ್ ಮಾಸ್ಟರ್ ಶರೀಫ್ ಮಾತನಾಡಿ, ವಿದ್ಯಾರ್ಥಿಗಳು ಸ್ಕೌಟ್ಸ್ ,ಗೈಡ್ಸ್ ಸಂಸ್ಥೆಯಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಭಾಗವಹಿಸಿ ರಾಜ್ಯಪಾಲರಿಂದ ಪುರಸ್ಕಾರವನ್ನು ಪಡೆಯಬಹುದು. ಈ ಸಂಸ್ಥೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಪ್ರಾಮಾಣಿಕತೆಯನ್ನು ಮೂಡಿಸುತ್ತಿದೆ. ಶಾಲೆಯ ಶಿಕ್ಷಕ ವಿರೂಪಾಕ್ಷಪ್ಪ ಫಕೀರಪೂರ, ಅಂಗನವಾಡಿ ಶಿಕ್ಷಕಿ ಭಾಗ್ಯ,ಮೋನಮ್ಮ,ಭವಾನಿ ಇತರರಿದ್ದಸರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts