ಸ್ಕೌಟ್ಸ್​-ಗೈಡ್ಸ್​ನ ಸಾಧಕ 1200 ವಿದ್ಯಾರ್ಥಿಗಳಿಗೆ ಸನ್ಮಾನ..

Lead
Published on

ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಮಾಹಿತಿ

ಮೇ 30ರಂದು ರಾಜ್ಯಮಟ್ಟದ ಕಾರ್ಯಕ್ರಮ

ವಿಜಯವಾಣಿ ಸುದ್ದಿಜಾಲ ಉಡುಪಿ

ಸ್ಕೌಟ್ಸ್​ ಮತ್ತು ಗೈಡ್ಸ್​ ಚಟುವಟಿಕೆಯಲ್ಲಿ ತೊಡಗಿ ಎಸ್​ಎಸ್​ಎಲ್​ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯದ 1200ಕ್ಕೂ ಅಧಿಕ ವಿದ್ಯಾರ್ಥಿಗಳಿಗಾಗಿ ಮೇ 30ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ರಾಜಾಂಗಣದಲ್ಲಿ ಗೌರವ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ ನೀಡಿದರು.

ಉಡುಪಿಯ ಪ್ರೆಸ್​ಕ್ಲಬ್​ನಲ್ಲಿ ಮೇ 26ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರ್ಯಾಯ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ. ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್​ ಸಿಂಧ್ಯಾ ಅಧ್ಯಕ್ಷತೆ ವಹಿಸಲಿದ್ದಾರೆ. 1ನೇ ರ್ಯಾಂಕ್​ನಿಂದ 10ನೇ ರ್ಯಾಂಕ್​ ಗಳಿಸಿದ 88 ವಿದ್ಯಾರ್ಥಿಗಳೂ ಇದರಲ್ಲಿ ಸೇರಿದ್ದಾರೆ ಎಂದರು.

ದಕ ಜಿಲ್ಲಾ ಮುಖ್ಯ ಆಯುಕ್ತ ಮೋಹನ ಆಳ್ವ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭಾ ಸ್ಪೀಕರ್​ ಯು.ಟಿ. ಖಾದರ್​, ಶಾಸಕರಾಸ ಯಶ್​ಪಾಲ್​ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಸುನೀಲಕುಮಾರ್​, ಕಿರಣಕುಮಾರ್​ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ ಮಧ್ವರಾಜ್​, ರಾಜ್ಯ ಸಂಘಟನಾ ಆಯೋಗದ ಪ್ರಭಾಕರ ಭಟ್​, ಸಿ.ಮಂಜುಳಾ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಆಯೋಗದ ಪ್ರಭಾಕರ ಭಟ್​, ಉಡುಪಿ ಜಿಲ್ಲಾ ಸ್ಕೌಟ್ಸ್​ ಆಯುಕ್ತ ಜನಾರ್ದನ ಕೊಡವೂರು, ರಾಜ್ಯ ಗೈಡ್ಸ್​ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ ಹಾಗೂ ತರಬೇತಿ ವಿಭಾಗದ ಶೃದ್ಧಾ ಪ್ರಸಾದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net