More

    ಬಿಗಿ ಬಂದೋಬಸ್ತ್‌ನಲ್ಲಿ ಎಸ್‌ಡಿಎ ಪರೀಕ್ಷೆ

    ರಾಯಚೂರು: ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಎಸ್‌ಡಿಎ ನೇಮಕಾತಿಗಾಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಸಲಾಯಿತು.
    ನಗರದ ಎಸ್‌ಆರ್‌ಪಿಎಸ್ ಪಿಯು ಕಾಲೇಜು, ಎಸ್‌ಎಸ್‌ಎಂ ಪದವಿ ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜು ಸೇರಿದಂತೆ ನಗರದ 9 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.
    ಬೆಳಗ್ಗೆ ಜರುಗಿದ ಕನ್ನಡ ಜ್ಞಾನ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದ 4,171 ಅಭ್ಯರ್ಥಿಗಳಲ್ಲಿ 1,583 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಿದ್ದು, 2,588 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಮಧ್ಯಾಹ್ನ ಜರುಗಿದ ಸಾಮಾನ್ಯ ಜ್ಞಾನ ಪರೀಕ್ಷೆಗೆ 1,504 ಅಭ್ಯರ್ಥಿಗಳು ಹಾಜರಾಗಿದ್ದು, 2,481 ಅಭ್ಯರ್ಥಿಗಳು ಗೈರಾಗಿದ್ದಾರೆ.
    ಪರೀಕ್ಷಾ ಕೇಂದ್ರಗಳ ಮುಂದೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಹೊರಗೆ ತಪಾಸಣೆ ನಡೆಸಿ ಒಳಗೆ ಬಿಡಲಾಯಿತು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts