

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ), ಸುಳ್ಯ ಎನ್ಎಂಸಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದ.ಕ. ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಚಾಂಪಿಯನ್ ಪಟ್ಟ ಗಳಿಸಿದೆ.
ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಕಾರ್ತಿಕ್, ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಸತ್ಯ ಪಡೆದುಕೊಂಡಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತಂಡದ ಆಶಿಷ್, ಕಾರ್ತಿಕ್, ಆಶಿಕ್, ಸೂರ್ಯ, ಚೇತನ್, ಸತ್ಯ ಅವರು ದ.ಕ. ಜಿಲ್ಲೆಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜು ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ತರಬೇತುದಾರರು, ಬೋಧಕ- ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.