ಪೂರಕ ಕೌಶಲದಿಂದ ಭವಿಷ್ಯ ಉತ್ತಮ : ಕಿರುತೆರೆ ಸಂಭಾಷಣೆ ಲೇಖಕಿ ಕೃತಿಕಾರಾಣಿ ಯಲ್ಲಾಪುರ ಸಲಹೆ

New Project (22)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ವಿದ್ಯಾರ್ಥಿಗಳು ಜೀವನದಲ್ಲಿ ತಮ್ಮ ಆದ್ಯತೆ ಏನೆಂಬುದನ್ನು ಅರಿತುಕೊಂಡು ಅದಕ್ಕೆ ಪೂರಕ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಂಡು ಮುಂದುವರಿಯಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿನಿ, ಕಿರುತೆರೆ ಧಾರವಾಹಿ ಸಂಭಾಷಣೆ ಬರಹಗಾರ್ತಿ ಕೃತಿಕಾರಾಣಿ ಯಲ್ಲಾಪುರ ಹೇಳಿದರು.

ಗುರುವಾರ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ ಒಂದು ದಿನದ ಅಂತರ್ ತರಗತಿ ಸ್ಪರ್ಧೆ ‘ಇಂಕ್‌ಸ್ಪೈರ್-2025’ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಟ್ರೋಫಿ ಅನಾವರಣಗೊಳಿಸಿ ಮಾತನಾಡಿ, ಉತ್ತಮ ಬರವಣಿಗೆ ಅಥವಾ ಸಂವಹನಕ್ಕೆ ಉತ್ತಮ ಜನಾಂಗವನ್ನು ರೂಪಿಸುವ ಶಕ್ತಿಯಿದೆ. ವಿದ್ಯಾರ್ಥಿಗಳು ಸಾಮರ್ಥ್ಯ ಕಂಡುಕೊಂಡು, ಅನಾವರಣಗೊಳಿಸಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ನಮ್ಮ ಕಾಲೇಜಿನಲ್ಲಿ ನಿರಂತರವಾಗಿ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಮಾತನಾಡಿ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ಹರಿಸುವುದು ಅಗತ್ಯ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಕಾರ್ಯಕ್ರಮ ನಿರ್ವಹಣೆಯಂತಹ ಕೌಶಲ ಅಭಿವೃದ್ಧಿ ಆಗುತ್ತದೆ ಎಂದರು.

ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಪ್ರತಿನಿಧಿ ತನುಶ್ರೀ, ಪ್ರಥಮ ವಷರ್ದ ವಿದ್ಯಾರ್ಥಿ ಪ್ರತಿನಿಧಿ ಪವನ್ ಉಪಸ್ಥಿತರಿದ್ದರು. ತೃತೀಯ ವರ್ಷದ ವಿದ್ಯಾರ್ಥಿ ಪ್ರತಿನಿಧಿ ಮಾನಸಾ ಪಿ.ಅಗ್ನಿಹೋತ್ರಿ ವಂದಿಸಿದರು. ವಿದ್ಯಾರ್ಥಿಗಳಾದ ಮನೀಶ್ ಶೆಟ್ಟಿ ಮತ್ತು ಸಿಂಚನ ಕಲ್ಲೂರಾಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net