ಎಸ್‌ಡಿಎಂ ಕಾಲೇಜಲ್ಲಿ ವಾರ್ಷಿಕ ಸ್ನೇಹಕೂಟ

New Project (18)
Published on

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪದವಿ, ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಶಿಕ್ಷಕರ ಸಂಘದ ವಾರ್ಷಿಕ ಸ್ನೇಹಕೂಟ ಮತ್ತು ಬೆಳದಿಂಗಳೂಟ ಕಾರ್ಯಕ್ರಮ ಪದವಿ ಕಾಲೇಜಿನ ಒಳಾಂಗಣದಲ್ಲಿ ನಡೆಯಿತು.

ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ.ಮಾತನಾಡಿ, ಗುಣಮಟ್ಟದಿಂದ ಕೂಡಿದ ಸಂಸ್ಕಾರಯುತ ಶಿಕ್ಷಣದಿಂದ ಕಾಲೇಜು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇದಕ್ಕೆ ಕಾಲೇಜಿನ ಶಿಕ್ಷಕರ ಶ್ರಮ ಕಾರಣ ಎಂದರು.

ಶೈಕ್ಷಣಿಕ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿನಂದಿಸಿದರು. ಶಿಕ್ಷಕರು ಮತ್ತು ಅವರ ಕುಟುಂಬದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಾಲೇಜಿನ ಒಳಾಂಗಣದಲ್ಲಿ ಬೆಳದಿಂಗಳೂಟ ಮಾಡಲಾಯಿತು. ಪ್ರಾಧ್ಯಾಪಕರಾದ ಅಶ್ವಿತ್ ಮತ್ತು ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

ಹೇಮಾವತಿ ವಿ.ಹೆಗ್ಗಡೆ, ಎಸ್‌ಡಿಎಂ ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್., ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್, ಸೋನಿಯಾ ಯಶೋವರ್ಮ, ಶಿಕ್ಷಕರ ಸಂಘದ ಕಾರ್ಯದರ್ಶಿ ಡಾ.ಸವಿತಾ ಕುಮಾರಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಮೋದ್‌ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net