ದೃಢ ಸಂಕಲ್ಪದಿಂದ ವ್ಯಸನಮುಕ್ತ

heggde
ಮದ್ಯವರ್ಜನ ಶಿಬಿರದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.
Published on

ಬೆಳ್ತಂಗಡಿ: ಮನಪರಿವರ್ತನೆ, ಭಗವಂತನ ಧ್ಯಾನ, ಮನಸ್ಸಿನ ಸಂಕಲ್ಪದಿಂದ ವ್ಯಸನಮುಕ್ತ ಸಾಧ್ಯ. ನಮ್ಮ ಮೇಲಿನ ನಿಯಂತ್ರಣ ನಾವೇ ಸಾಧಿಸಬೇಕು. ವ್ಯಸನದಿಂದ ಸಾಧನೆ ಮಾಡುವುದು ಅಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 222ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಮಾತನಾಡಿದರು.

ಎಂಟು ದಿನ ನಡೆದ ಶಿಬಿರದಲ್ಲಿ ವಿವಿಧೆಡೆಯಿಂದ ಒಟ್ಟು 74 ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ಮನೋವೈದ್ಯಕೀಯ ಚಿಕಿತ್ಸೆ, ಯೋಗ, ಸಲಹಾ ಕಾರ್ಯಕ್ರಮಗಳನ್ನು ಆಯೋಜಿಸಿ ಮನಪರಿವರ್ತನೆಗೆ ಆದ್ಯತೆ ನೀಡಲಾಗಿದೆ. ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಸ್, ಯೋಜನಾಧಿಕಾರಿ ಮಾಧವ ಗೌಡ, ಶಿಬಿರಾಧಿಕಾರಿಗಳಾದ ದಿನೇಶ್ ಮರಾಠಿ, ಚಿತ್ತರಂಜನ್, ಆರೋಗ್ಯ ಸಹಾಯಕಿಯರಾದ ಜಯಲಕ್ಷ್ಮೀ, ಶ್ವೇತಾ ಸಹಕರಿಸಿದರು. ಮುಂದಿನ ವಿಶೇಷ ಶಿಬಿರ ಜು.6ರಂದು ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net