ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ

dharmasthala
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
Published on

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.

ವಿದ್ಯಾರ್ಥಿಗಳಾದ ಪವನ್ ಕೃಷ್ಣ, ಪ್ರತೀಕ ಹಾಗೂ ಮಾನ್ಯ ಪೈ ಪರಿಸರದ ಕುರಿತು ಭಾಷಣ, ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಗಳು, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಪರಿಸರ ದಿನಾಚರಣೆಯಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು. ಶಾಲಾ ಮುಖ್ಯಶಿಕ್ಷಕ ಮನ್ಮೋಹನ್ ನಾಯ್ಕ ಕೆ.ಜಿ.ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಅನುಜ್ಞ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net