More

    ಉತ್ತಮ ಭವಿಷ್ಯಕ್ಕಾಗಿ ಕಠಿಣ ಪರಿಶ್ರಮ ಅಗತ್ಯ

    ಧಾರವಾಡ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಕಠಿಣ ಪರಿಶ್ರಮ ಅತ್ಯಗತ್ಯ. ವೃತ್ತಿ ಮತ್ತು ಪ್ರವೃತ್ತಿ ಎರಡನ್ನೂ ರೂಢಿಸಿಕೊಳ್ಳಬೇಕು. ಕೆಲಸದಲ್ಲಿ ಶಿಸ್ತು ಮತ್ತು ಬದ್ಧತೆ ವಿದ್ಯಾರ್ಥಿಗಳನ್ನು ಪರಿಪೂರ್ಣರನ್ನಾಗಿ ಮಾಡುತ್ತದೆ ಎಂದು ಎಸ್‌ಡಿಎಂ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
    ಇಲ್ಲಿನ ಸತ್ತೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಫಿಸಿಯೋಥೆರಪಿ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಕ್ರೀವಾ- 2023 ಸಾಂಸ್ಕೃತಿಕ ಉತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಕಾರ್ಯಕ್ರಮ ಉದ್ಘಾಟಿಸಿದ ಪದ್ಮಶ್ರೀ ಪಂ. ಎಂ. ವೆಂಕಟೇಶ ಕುಮಾರ ಮಾತನಾಡಿ, ಎಸ್‌ಡಿಎಂ ವಿಶ್ವವಿದ್ಯಾಲಯವು ಅಧ್ಯಯನಕ್ಕೆ ಪೂರಕವಾಗಿದೆ. ಇದು ಪ್ರಾಚೀನ ಕಾಲದ ಗುರುಕುಲ ಪದ್ಧತಿಯನ್ನು ನೆನಪಿಸುತ್ತದೆ. ಧಾರವಾಡವು ಸಂಸ್ಕೃತಿ ಮತ್ತು ಸಂಪ್ರದಾಯಗಳ ಕೇಂದ್ರಬಿಂದುವಾಗಿದೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.
    ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನ್ ಕುಮಾರ, ಕಾರ್ಯನಿವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ಡಾ. ಎಸ್.ಕೆ. ಜೋಶಿ ಮತ್ತು ವಿ. ಜೀವಂಧರ ಕುಮಾರ, ಕುಲಸಚಿವ ಡಾ. ಚಿದೇಂದ್ರ ಎಂ. ಶೆಟ್ಟರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts