ಎಸ್‌ಡಿಎಂ ಆಸ್ಪತ್ರೆಗೆ ಜೀವಂಧರ್ ಕುಮಾರ್ ಭೇಟಿ

09
Published on

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್‌ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಜೀವಂಧರ್ ಕುಮಾರ್ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು, ಲೀಡರ್ ಇದ್ದ ಹಾಗೆ ಫಾಲೋವರ್ಸ್‌ ಇರುತ್ತಾರೆ. ಡಾ.ಹೆಗ್ಗಡೆಯವರಂತಹ ಮಹಾನ್ ವ್ಯಕ್ತಿಯ ಲೀಡರ್‌ಶಿಪ್ ನಮಗಿರುವಾಗ ನಾವೇ ಅತ್ಯಂತ ಧನ್ಯರು. ಇಲ್ಲಿನ ವೈದ್ಯರಲ್ಲಿ, ಸಿಬ್ಬಂದಿಗಳಲ್ಲಿ ವಿಶೇಷವಾಗಿ ನಾನು ನಗುಮೊಗವನ್ನು ಕಾಣುತ್ತಿದ್ದೇನೆ. ಡಾ.ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ವ್ಯವಸ್ಥಾಪಕ ನಿರ್ದೇಶಕರಾದ ಎಂ.ಜನಾರ್ದನ್ ನಾಯಕತ್ವದಲ್ಲಿ ಆಸ್ಪತ್ರೆ ಬೆಳೆಯುತ್ತಿದೆ. ಡಾ.ಹೆಗ್ಗಡೆಯವರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುತ್ತಿರುವ ನಿಮ್ಮೆಲ್ಲರಿಂದ ಈ ಆಸ್ಪತ್ರೆ ಮತ್ತಷ್ಟು ಬೆಳಯಲಿದೆ ಎಂದರು.

ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಸ್ವಾಗತಿಸಿದರು. ಪೆಥಲಾಜಿಸ್ಟ್ ಡಾ.ಮೇಘಾ ಹಾಗೂ ಎಲ್ಲ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net