ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರ ಆಕ್ರೋಶ!

Savarkar
Published on

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರಂಭದ ಪ್ರಯುಕ್ತ ಮಾಲ್​ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಸಿಟಿ ಸೆಂಟರ್ ಮಾಲ್​ನಲ್ಲಿ ಇದರಿಂದಾಗಿ ಕೆಲವು ಕಾಲ ಗೊಂದಲದ ವಾತಾವರಣವೂ ಉಂಟಾಯಿತು. ಸ್ವಾತಂತ್ರ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ‌ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಅವುಗಳಲ್ಲಿ ಸಾವರ್ಕರ್ ಭಾವಚಿತ್ರ ಇರುವುದನ್ನು ಕಂಡ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ ಹೋರಾಟಗಾರನಾಗಲು ಸಾಧ್ಯ? ಎಂದು ಎಸ್​​ಡಿಪಿಐ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಪ್ರತಿಭಟನೆಯನ್ನೂ ನಡೆಸಿದರು. ಸಾವರ್ಕರ್ ಚಿತ್ರದ ಬದಲು ಸ್ವಾತಂತ್ರ್ಯಕ್ಕಾಗಿ ಜೀವಕೊಟ್ಟವರ ಭಾವಚಿತ್ರ ಹಾಕುವಂತೆ ಪಟ್ಟುಹಿಡಿದರು. ಈ ವೇಳೆ ಸಾವರ್ಕರ್ ಭಾವಚಿತ್ರದೊಂದಿಗೆ ಅಬ್ದುಲ್ ಕಲಾಮ್ ಅಜಾದ್ ಅವರ ಭಾವಚಿತ್ರ ಹಾಕುವುದಾಗಿ ಹೇಳಿ ಮಾಲ್​ ಸಿಬ್ಬಂದಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net