ರಸ್ತೆ ದುರಸ್ತಿಗೆ ಆಗ್ರಹಿಸಿ ಎಸ್‌ಡಿಪಿಐ ಮನವಿ

02
Published on

ಪುತ್ತೂರು ಗ್ರಾಮಾಂತರ: ಕಾವು- ಈಶ್ವರಮಂಗಲ- ಪಳ್ಳತ್ತೂರು ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈಶ್ವರಮಂಗಲ ಕೆಳಗಿನ ಪೇಟೆಯ ರಸ್ತೆ ಭಾಗದಲ್ಲಿ ಬೃಹತ್ ಗುಂಡಿ ನಿರ್ಮಾಣವಾಗಿದೆ. ಯಾವುದೇ ಸಂದರ್ಭದಲ್ಲಿ ಅನಾಹುತ ಸಂಭವಿಸಬಹುದಾದ ಅಪಾಯ ಇರುವುದರಿಂದ ಕೂಡಲೇ ದುರಸ್ತಿ ಕಾರ್ಯ ನಡೆಸುವಂತೆ ಆಗ್ರಹಿಸಿ ಎಸ್‌ಡಿಪಿಐ ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.

ಎಸ್‌ಡಿಪಿಐ ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ಅಧ್ಯಕ್ಷ ಫಾರೂಕ್ ಟಿ.ಎ., ನೆಟ್ಟಣಿಗೆ ಮುಡ್ನೂರು ಗ್ರಾಪಂ ಸದಸ್ಯ ರಿಯಾಝ್ ಗೋಳಿತ್ತಡಿ, ಸಂಘಟನೆ ಪ್ರಮುಖರಾದ ರಶೀದ್, ವಾಖಿದ್, ಸಾದಕ್ ಅವರು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತಗೆ ಮನವಿ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net