More

    ಹಕ್ಕು ಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

    ಚಿತ್ರದುರ್ಗ: ನಗರಸಭೆಯ 10ನೇ ವಾರ್ಡಿನ ಚೋಳುಗುಡ್ಡ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

    ಜಿಲ್ಲಾಧಿಕಾರಿ ಅವರ ಸೂಚನೆ ನಂತರವೂ ಕೊಳೆಗೇರಿ ಮಂಡಳಿಯ ಇಂಜಿನಿಯರ್ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ. ಇದರಿಂದಾಗಿ ಅರ್ಹರಿಗೆ ಅನ್ಯಾಯವಾಗುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಎಸ್ಡಿಪಿಐ ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್, ಉಪಾಧ್ಯಕ್ಷ ಕ್ರಾಮಾನ್ ಆಲಿ, ಪ್ರಧಾನ ಕಾರ್ಯದರ್ಶಿ ಸೈಯದ್ ಸಾದತ್, ತಾಲ್ಲೂಕು ಅಧ್ಯಕ್ಷ ಜಾಕೀರ್ ಹುಸೇನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts