ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆಗೆ ಖಂಡನೆ

New Project (13)
Published on

ಬೆಳ್ತಂಗಡಿ: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ, ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಮಾತನಾಡಿ, ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಮುಸ್ಲಿಮರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡುವಂತೆ ಅಧಿಕಾರಿಗಳಲ್ಲಿ ಕೋರಿದ್ದರು. ಈ ಕುರಿತು ರೈತರು ಮಹದೇವಪುರದಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಜತೆ ನಡೆದ ಸಭೆಯಲ್ಲಿ ಮುಸ್ಲಿಮರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಜಮೀನು ಉಳುವವರು ನನ್ನ ಬಳಿ ಬಂದಿದ್ದರು. ನಾನು ದರ್ಖಾಸ್ತು ಮುಂದಕ್ಕೆ ನೋಡುವ, ಸದ್ಯಕ್ಕೆ ಏನು ಮಾಡಲಾಗುವುದಿಲ್ಲ ಎಂದು ತಿಳಿಸಿದ್ದೇನೆ. ಸರ್ಕಾರಿ ಭೂಮಿಯನ್ನು ಮುಸ್ಲಿಮರ ಹೆಸರಿಗೆ ಮಾಡಿದರೆ ಅಂತಹವರನ್ನು ನೇಣಿಗೆ ಹಾಕುವುದು ಗ್ಯಾರಂಟಿ ಎಂದು ಶಾಸಕರು ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಸಂವಿಧಾನಾತ್ಮಕ ಪ್ರಕ್ರಿಯೆಗೆ ಸವಾಲು ಎಸೆದಿದ್ದಾರೆ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಶಾಸಕ ಸ್ಥಾನ ತೆರವುಗೊಳಿಸುವಂತೆ ಮುಖ್ಯಮಂತ್ರಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಅಶಾಕ್ ಪುಂಜಾಲಕಟ್ಟೆ, ಸ್ವಾಲಿ ಮದ್ದಡ್ಕ, ಸಲೀಂ ಗುರುವಾಯನಕೆರೆ, ಅಶ್ರ್ ಕಟ್ಟೆ, ಮುಸ್ತಾ ಬಂಗೇರಕಟ್ಟೆ, ಮಹಮ್ಮದ್ ಆಲಿ ಉಜಿರೆ, ರಿಯಾಝ್ ಬೆಳ್ತಂಗಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net