ಬೆಳ್ತಂಗಡಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಎಸ್‌ಡಿಪಿಐ ಬೆಂಬಲಿಗರು

ಬೆಲತಅನಗ್ಅ
Published on

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಮ ಪಂಚಾಯಿತಿ ಮತ ಎಣಿಕೆ ನಡೆಯುತ್ತಿದ್ದ ವೇಳೆ ಎಸ್‌ಡಿಪಿಐ ಬೆಂಬಲಿಗರು ಪಾಕಿಸ್ತಾನಪರ ಘೋಷಣೆ ಕೂಗಿದ್ದಾರೆ.

ಮೊದಲನೇ ಸುತ್ತಿನ ಮತದಾನ ಮುಗಿಯುತ್ತಿದ್ದಂತೆ ಎರಡು ಸ್ಥಾನಗಳಲ್ಲಿ ಗೆಲುವು ಪಡೆದ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಮೆರವಣಿಗೆ ನಡೆಸಿದ ಕಾರ್ಯಕರ್ತರು ಪಕ್ಷದ ಧ್ವಜದೊಂದಿಗೆ ಪಾಕಿಸ್ತಾನ ಪರ ಘೋಷಣೆ ಕೂಗಿದರು.

ಸುಮಾರು 50ರಷ್ಟು ಇದ್ದ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ 500ಕ್ಕೂ ಅಧಿಕ ಇದ್ದ ಬಿಜೆಪಿ ಬೆಂಬಲಿಗರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಪರಿಸ್ಥಿತಿ ಹದಗೆಡುತ್ತಿದ್ದಂತೆ ಪೊಲೀಸರು ಮತ ಎಣಿಕೆ ಆವರಣದಿಂದ ಎಲ್ಲರನ್ನೂ ಚದುರಿಸಿದರು. ಬಳಿಕ ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿಗಳು ಮತ್ತು ಓರ್ವ ಏಜೆಂಟನ್ನು ಮಾತ್ರ ಪ್ರವೇಶಕ್ಕೆ ಅನುವು ಮಾಡಿಕೊಟ್ಟರು.

ವಿಡಿಯೋ ತುಣುಕುಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ ಎಸ್‌ಪಿ ನೇತೃತ್ವದ ತಂಡ ವಿಡಿಯೋ ತುಣುಕುಗಳನ್ನು ಸಂಗ್ರಹಿಸಿ ದೇಶದ್ರೋಹಿ ಚಟುವಟಿಕೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net