20.3 C
Bangalore
Sunday, December 15, 2019

ಭದ್ರಾ ಮೇಲ್ದಂಡೆ ಯೋಜನೆ ನಾಲೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ವೇದಾವತಿ ನದಿಯಿಂದ ವಾಣಿವಿಲಾಸ ಸಾಗರಕ್ಕೆ ನೀರು

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆ ನಾಲೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಪ್ರಯತ್ನ ನಡೆದಿದೆ. ಅಜ್ಜಂಪುರ, ಹೊಸದುರ್ಗ ತಾಲೂಕಿನ ಮೂಲಕ ಭದ್ರೆ 10-15 ದಿನದೊಳಗೆ ವಾಣಿವಿಲಾಸ ಜಲಾಶಯದ ಒಡಲು ಸೇರಲಿದ್ದಾಳೆ.

ಚಿತ್ರದುರ್ಗ ಜಿಲ್ಲೆಯ ರೈತರ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಲೆ ಕಾಮಗಾರಿ ಮುಗಿಯುವವರೆಗೆ ಕಾಯದೆ ವೇದಾವತಿ ನದಿ ಮೂಲಕ ನೀರು ಹರಿಸಲು ಸೂಚನೆ ನೀಡಿದ್ದಾರೆ.

ಅಜ್ಜಂಪುರ ತಾಲೂಕು ಹೆಬ್ಬೂರು ಬಳಿ ನಾಲೆಗೆ ಹಾಕಿದ್ದ ಮಣ್ಣಿನ ಬಂಡ್ ಶನಿವಾರ ಬೆಳಗ್ಗೆ 8.30ಕ್ಕೆ ತೆರವು ಮಾಡುವ ಮೂಲಕ ಭದ್ರಾ ಜಲಾಶಯದ ನೀರನ್ನು ವೇದಾವತಿ ನದಿಗೆ ಹರಿಸುವ ಕಾರ್ಯಕ್ಕೆ ಇಂಜಿನಿಯರ್​ಗಳು ಚಾಲನೆ ನಿಡಿದರು. ಶುಕ್ರವಾರವೇ ನೀರು ಹರಿಸುವ ಉದ್ದೇಶವಿದ್ದರೂ ನಾಲೆಯಲ್ಲಿ ಒಂದಿಷ್ಟು ಮಣ್ಣಿನ ಕೆಲಸ ಇದ್ದುದರಿಂದ ಅದನ್ನು ಪೂರ್ಣಗೊಳಿಸಿ ಶನಿವಾರ ಬೆಳಗ್ಗೆ 8.30ಕ್ಕೆ ಪೂಜೆ ಸಲ್ಲಿಸಿ ನೀರು ಹರಿಸಲಾಯಿತು.

ಭದ್ರಾ ಜಲಾಶಯದಿಂದ ಪಂಪ್ ಮಾಡಿದ ನೀರು ನಾಲೆಯಲ್ಲಿ 9 ಕಿಮೀ ನಿಂತಿದ್ದು, ಆ ನೀರನ್ನು ಬಿಡಲಾಗುತ್ತಿದೆ. ನಾಲೆಯಲ್ಲಿ ನಿಂತ ನೀರು ಖಾಲಿಯಾದ ನಂತರ, ಶಾಂತಿಪುರ ಮತ್ತು ಬೆಟ್ಟದತಾವರೆ ಪಂಪ್​ಹೌಸ್​ನಿಂದ ನಾಲ್ಕು ಮೋಟಾರ್​ಗಳಲ್ಲಿ ತಲಾ ಒಂದನ್ನು ಮಾತ್ರ ಸ್ಟಾರ್ಟ್ ಮಾಡಿ ನಿತ್ಯ 400-500 ಕ್ಯೂಸೆಕ್ ನೀರು ಹರಿಸಲಾಗುತ್ತದೆ. ಪ್ರಾರಂಭದಲ್ಲಿ 200-250 ಕ್ಯೂಸೆಕ್ ನೀರನ್ನು ಮಾತ್ರ ಹರಿಬಿಡಲಾಗಿದೆ.

ಬೆಟ್ಟದತಾವರೆ ಪಂಪ್​ಹೌಸ್​ನಿಂದ ಅಜ್ಜಂಪುರ ಸಮೀಪದ ಹೆಬ್ಬೂರು ತನಕದ ನಾಲೆಯಲ್ಲಿ ನೀರು ನಿಂತಿದ್ದು, ಇದು ಖಾಲಿ ಆಗಲು ಐದು ದಿನ ಬೇಕಾಗಬಹುದು. ನಂತರ ಎರಡು ಜಾಕ್​ವೆಲ್​ನ ಒಂದೊಂದು ಮೋಟಾರ್ ಮೂಲಕ ಜಲಾಶಯದಿಂದ ನೀರು ಎತ್ತಿ ಹರಿಸಲಾಗುವುದು.

ಎರಡು ಟಿಎಂಸಿ ನೀರು ಮಾತ್ರ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ವಾಣಿವಿಲಾಸ ಜಲಾಶಯಕ್ಕೆ ಎರಡು ಟಿಎಂಸಿ ನೀರು ಮಾತ್ರ ಮೀಸಲಿಡಲಾಗಿದೆ. ಇಷ್ಟು ನೀರನ್ನು 500 ಕ್ಯೂಸೆಕ್​ನಂತೆ ಹರಿಸಲು ಎರಡು ತಿಂಗಳು ಬೇಕಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆಗೆ ತುಂಗಾ ಮತ್ತು ಭದ್ರಾ ನದಿಯಿಂದ 29 ಟಿಎಂಸಿ ನೀರು ಮಂಜೂರಾಗಿದ್ದು, 12.2 ಟಿಎಂಸಿಯನ್ನು ಭದ್ರಾ ಜಲಾಶಯದಿಂದ ಬಳಸಿಕೊಳ್ಳಲು ಅವಕಾಶವಿದೆ. ಇಷ್ಟು ಪ್ರಮಾಣದ ನೀರನ್ನೂ ಸದ್ಯ ವಾಣಿವಿಲಾಸಕ್ಕೆ ಹರಿಸಬೇಕೆಂಬ ಬೇಡಿಕೆ ರೈತರದ್ದಾಗಿದೆ. ಸರ್ಕಾರ ಅನುಮತಿ ನೀಡಿದರೆ ಮುಂದಿನ ಮಾರ್ಚ್​ವರೆಗೆ 8-10 ಟಿಎಂಸಿ ನೀರನ್ನು ಜಲಾಶಯಕ್ಕೆ ಹರಿಸಬಹುದಾಗಿದೆ. ವಾಣಿವಿಲಾಸ ಸಾಗರ 35 ಟಿಎಂಸಿ ನೀರು ಶೇಖರಣಾ ಸಾಮರ್ಥ್ಯ ಹೊಂದಿದೆ.

ಕುಕ್ಕೆಸಮುದ್ರ ಕೆರೆಗೆ ನೀರು: ತರೀಕೆರೆ ತಾಲೂಕು ಲಕ್ಕವಳ್ಳಿ ಬಳಿಯ ಭದ್ರಾ ಜಲಾಶಯದಿಂದ ಅಜ್ಜಂಪುರ ತಾಲೂಕು ಹೆಬ್ಬೂರಿನವರೆಗೆ ನಾಲೆ ನಿರ್ವಣವಾಗಿದೆ. ಅಲ್ಲಿಂದ ತುಮಕೂರು ಹಾಗೂ ಚಿತ್ರದುರ್ಗ ನಾಲೆ (ವೈ ಜಂಕ್ಷನ್) ಇಬ್ಭ್ಬಾಗವಾಗಲಿದ್ದು, ಇನ್ನೂ ಕಾಮಗಾರಿ ನಡೆಯುತ್ತಿದೆ. ಅಜ್ಜಂಪುರ ತಾಲೂಕಿನ ಹೆಬ್ಬೂರು ಸಮೀಪದ ಕಾಟಿಗನರಿ ಹಳ್ಳಕ್ಕೆ ಈಗ ಭದ್ರಾ ನಾಲೆ ನೀರು ಬಿಡಲಾಗಿದ್ದು, ಇಲ್ಲಿಂದ 18-20 ಕಿ.ಮೀ. ದೂರ ಸಾಗಿದರೆ ಕುಕ್ಕೆಸಮುದ್ರ ಕೆರೆ ಸಿಗುತ್ತದೆ. ಈ ಕೆರೆ ಮಳೆ ನೀರಿಗೆ ತುಂಬಿದ್ದು, ಇದರ ಕೋಡಿ ನೀರು ವೇದಾವತಿಗೆ ಹರಿಯುತ್ತದೆ. ಕೆರೆಗೆ ಬರುವ ನಾಲೆ ನೀರು ಕೋಡಿ ಮೂಲಕ ವೇದಾವತಿ ನದಿ ಸೇರಿ ಅಲ್ಲಿಂದ 13 ಕಿಮೀ ಸಾಗಿ ಹೊಸದುರ್ಗ ತಾಲೂಕು ಕೆಲ್ಲೋಡು ಬಳಿ ವಾಣಿವಿಲಾಸ ಸಾಗರದ ಹಿನ್ನೀರು ಸೇರುತ್ತದೆ.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...