ಸೆ. 14 ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌

ort-order.
Published on

ಮೈಸೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ. 14 ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ.
ಎಲ್ಲ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಇದಾಗಿದೆ.
ಮೈಸೂರು ನಗರ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಒಟ್ಟು 1,17,013 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 58,030 ಸಿವಿಲ್ ಪ್ರಕರಣಗಳು ಹಾಗೂ 58,983 ಕ್ರಿಮಿನಲ್ ಪ್ರಕರಣಗಳಿವೆ. ಪ್ರಸ್ತುತ ಸದರಿ ಪ್ರಕರಣಗಳಲ್ಲಿ 30,000 ಕ್ಕಿಂತ ಹೆಚ್ಚಿನ ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳೆಂದು ಗುರುತಿಸಲಾಗಿದೆ.
ರಾಜಿಯಾಗುವಂತಹ ಯಾವುದೇ ಪ್ರಕರಣಗಳನ್ನು ಕಕ್ಷಿಗಾರರ ವಿನಂತಿಯ ಮೇರೆಗೆ ಸಂಬಂಧಪಟ್ಟ ನ್ಯಾಯಾಲಯಗಳಲ್ಲಾಗಲೀ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಸಂಬಂಧಪಟ್ಟ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ, ಅಂತಹ ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲು ಕ್ರಮಕೈಗೊಳ್ಳಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net