10ನೇ ತರಗತಿ ಕಲಿತವರಿಗೆ SECL ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆಗೆ ಫೆ.27 ಕೊನೆ ದಿನ

SECL
Published on

ಬೆಂಗಳೂರು: ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (SECL) ಭಾರತದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಕಂಪನಿಯಾಗಿದ್ದು, ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಗಳಲ್ಲಿ ಒಂದಾಗಿದೆ. ಪ್ರಸ್ತುತ ಈ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆ.27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆ: 75

ಹುದ್ದೆಯ ವಿವರ 
ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ 25
ಜನರಲ್ ಡ್ಯೂಟಿ ಅಸಿಸ್ಟೆಂಟ್ 25
ಆಫೀಸ್ ಅಸಿಸ್ಟೆಂಟ್ 25

ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ, ವೇತನ
ಅಭ್ಯರ್ಥಿಯ ವಯಸ್ಸು 18 ವರ್ಷದೊಳಗಿರಬೇಕು. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 6,000ರೂ. ಮಾಸಿಕವೇತನ ಇರಲಿದೆ.

ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಮೆರಿಟ್ ಲಿಸ್ಟ್ ಮತ್ತು ದಾಖಲೆ ಪರಿಶೀಲನೆಯನ್ನು ಆಧರಿಸಿರಲಿದೆ.

ಅರ್ಜಿ ಸಲ್ಲಿಕೆ
ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ
secl-cil.in

ಅರ್ಜಿ ಸಲ್ಲಿಸಲು ಕೊನೇ ದಿನ 
27-02-2024

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net