More

  ಟ್ರಾಫಿಕ್ ಫೈನ್, ಮತ್ತೆ 50% ಆಫರ್​​: ಎಷ್ಟು ದಿನಗಳವರೆಗೆ ಅವಕಾಶ?

  ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ಪಾವತಿಗೆ ಎರಡನೇ ಬಾರಿ ಶೇ.50 ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಶನಿವಾರದಿಂದ (ಮಾ.4) 15 ದಿನಗಳ ಕಾಲಾವಕಾಶ ನೀಡಲಾಗಿದೆ. ಫೆ.11ರ ಒಳಗಿನ ಬಾಕಿ ಸಂಚಾರ ಪ್ರಕರಣಗಳಿಗಷ್ಟೇ ಇದು ಅನ್ವಯ ಆಗಲಿದೆ ಎಂದು ಸಾರಿಗೆ ಇಲಾಖೆ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

  ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

  ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಡಾ.ಎಂ.ಎ. ಸಲೀಂ, ಜಂಟಿ ಪೊಲೀಸ್ ಆಯುಕ್ತ(ಸಂಚಾರ) ಎಂ.ಎನ್. ಅನುಚೇತ್, ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ, ಕಾನೂನು ಇಲಾಖೆ ಕಾರ್ಯದರ್ಶಿಗಳ ಸಭೆ ನಡೆದಿತ್ತು.

  ಇದನ್ನೂ ಓದಿ: ಷಾ ಕಾರ್ಯಕ್ರಮದಲ್ಲಿ ಭಾರಿ ಬದಲಾವಣೆ; ಕೆಂಪೇಗೌಡರ ಜನ್ಮಸ್ಥಳಕ್ಕೆ ಭೇಟಿ ರದ್ದು, ದೇವಾಲಯ ದರ್ಶನವೂ ಕ್ಯಾನ್ಸೆಲ್

  ಫೆ.3 ರಿಂದ 11ವರೆಗೆ ದಂಡದ ಮೊತ್ತದ ಮೇಲೆ ಶೇ.50 ರಿಯಾಯಿತಿ ನೀಡಿರುವುದಕ್ಕೆ ಜನರಿಂದ ಉತ್ತಮ ಸ್ಪಂದನೆ ಲಭಿಸಿದೆ. 52 ಲಕ್ಷ ಪ್ರಕರಣಗಳಲ್ಲಿ 152 ಕೋಟಿ ರೂ. ಸಂಗ್ರಹವಾಗಿತ್ತು. ಜನರೇ ಸ್ವಯಂ ಪ್ರೇರಿತವಾಗಿ ದಂಡ ಪಾವತಿ ಮಾಡಿದ್ದಾರೆ. ಮತ್ತೊಂದು ಅವಕಾಶ ಕೊಡಬೇಕೆಂದು ಜನರಿಂದ ಮನವಿ ಬಂದಿತ್ತು. ಇದರ ಮೇರೆಗೆ ಮತ್ತೆ 15 ದಿನಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಆರ್ಥಿಕ ಇಲಾಖೆ ಮತ್ತು ಕಾನೂನು ಇಲಾಖೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

  ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts